ಅಕ್ರಮ ಮರಳುಗಾರಿಕೆ ಆರೋಪ: ಮೂರು ವಾಹನ ವಶ
ಕುಂದಾಪುರ, ಆ.28: ಅಕ್ರಮ ಮರಳುಗಾರಿಕೆಗೆ ಸಂಬಂಧಿಸಿ ಮೂರು ವಾಹನಗಳನ್ನು ಗಂಗೊಳ್ಳಿ ಪೊಲೀಸರು ಆ.27 ರಾತ್ರಿ ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಬಗ್ಗೆ ದೂರುಗಳು ಬಂದ ಹಿನ್ನೆಲೆ ಗಂಗೊಳ್ಳಿ ಎಸ್ಸೈ ಹರೀಶ್ ಆರ್. ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದು ಮೊವಾಡಿ ಹಾಗೂ ತ್ರಾಸಿ ಪ್ರದೇಶದಲ್ಲಿ ಮೂರು ವಾಹನಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ಬಗ್ಗೆ ಮುಂದಿನ ಕ್ರಮ ವಹಿಸುವಂತೆ ಗಣಿ ಮತ್ತು ಭೂ ವಿಜ್ಞಾನಿ ಇಲಾಖೆಗೆ ಕೋರಿಕೆ ಪತ್ರ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
Next Story