ವಿಕಲಚೇತನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
ಉಡುಪಿ : ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಜ್ಯ ಸರಕಾರದ ವಿದ್ಯಾರ್ಥಿ ವೇತನ ಯೋಜನೆಯಡಿ ಪೋಸ್ಟ್ ಮ್ಯಾಟ್ರಿಕ್ ಮತ್ತು ಪ್ರೀಮ್ಯಾಟ್ರಿಕ್ ವಿದ್ಯಾರ್ಥಿ ವೇತನ ಸೌಲಭ್ಯ ಪಡೆಯಲು ವಿಕಲಚೇತನ ವಿದ್ಯಾರ್ಥಿಗಳಿಂದ ಎಸ್.ಎಸ್.ಪಿ ತಂತ್ರಾಂಶದಲ್ಲಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
1ರಿಂದ 10ನೇ ತರಗತಿವರೆಗಿನ ವಿಕಲಚೇತನ ವಿದ್ಯಾರ್ಥಿಗಳು ಹೊಸ ಅರ್ಜಿಯನ್ನು - https://ssp.karnataka.gov.in/ssp2324/homenew.aspx- ಮೂಲಕ ಹಾಗೂ ನವೀಕರಣ ಅರ್ಜಿಯನ್ನು -https://ssp.karnataka.gov.in/ssp2324/signin.aspx- ಮೂಲಕ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳ ಅಂತಸ್ತು, ಜಿಲ್ಲಾಧಿಕಾರಿ ಕಛೇರಿ ಸಂಕೀಣ ರಜತಾದ್ರಿ, ಮಣಿಪಾಲ ಉಡುಪಿ ದೂರವಾಣಿ ಸಂಖ್ಯೆ: 0820-2574810, 2574811ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.