ಅದಾನಿ ಸಮೂಹದ ಅಧ್ಯಕ್ಷ ಕಿಶೋರ್ ಆಳ್ವಗೆ ಪ್ರಶಸ್ತಿ
ಉಡುಪಿ, ನ.7: ರಾಜ್ಯದಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ಸಲ್ಲಿಸುತ್ತಿರುವ ಸೇವೆಯನ್ನು ಗುರುತಿಸಿ ಅದಾನಿ ಸಂಸ್ಥೆಯ ಅಧ್ಯಕ್ಷ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ ಅವರಿಗೆ ಮಹಾತ್ಮ ಗಾಂಧಿ ಅಂತಾರಾಷ್ಟ್ರೀಯ ಪ್ರಶಸ್ತಿ ಯನ್ನು ಪ್ರದಾನ ಮಾಡಲಾಯಿತು.
ಮಾಧ್ಯಮ ಕ್ಷೇತ್ರದ ಸಂಸ್ಥೆಯಾದ ಸ್ಪೇಸ್ ಮೀಡಿಯಾ ವತಿಯಿಂದ ನ.6ರಂದು ಬೆಂಗಳೂರು ಗಾಂಧಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕ ರಾಜ್ಯಪಾಲ ಥಾವರ್ ಚಂದ ಗೆಹ್ಲೋಟ್ ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್, ಎಸ್.ಡಿ.ಎಂ ಶಕ್ಷಣಿಕ ಸಮೂಹ ಸಂಸ್ಥೆಗಳ ಡಾ.ಧರ್ಮಸ್ಥಳ ಸುರೇಂದ್ರ ಕುಮಾರ್ ಉಪಸ್ಥಿತರಿದ್ದರು.
Next Story