ಕುಂದಾಪುರ ತಾಲೂಕು ಆಸ್ಪತ್ರೆಗೆ ಅತ್ಯುತ್ತಮ ನಿರ್ವಹಣಾ ಪ್ರಶಸ್ತಿ
ಕುಂದಾಪುರ, ಆ.18: ರಾಜ್ಯದಲ್ಲಿ ಆಯುಷ್ಮಾನ್ ಭಾರತ್ ಕರ್ನಾಟಕ (ಎಬಿಪಿಎಂಜೆಎವೈ-ಎಆರ್ಕೆ) ಯೋಜನೆಯನ್ನು ಅನುಷ್ಠಾನಗೊಳಿಸುವಲ್ಲಿ ಸಾರ್ವಜನಿಕ ಹಾಗೂ ಖಾಸಗಿ ಆರೋಗ್ಯ ಸಂಸ್ಥೆಗಳ ಅತ್ಯುತ್ತಮ ಕಾರ್ಯ ಕ್ಷಮತೆಯ ವಿವರ ಮತ್ತು ಯೋಜನೆಯ ಬಳಕೆಯಲ್ಲಿ ಅತ್ಯುತ್ತಮ ನಿರ್ವಹಣೆ ಸಾಧಿಸಿರುವುದನ್ನು ಪರಿಗಣಿಸಿ ’ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆ’ಗೆ ’ಆಯುಷ್ಮಾನ್ ಅತ್ಯುತ್ತಮ ನಿರ್ವಹಣ ಪ್ರಶಸ್ತಿ’ ಲಭಿಸಿದೆ.
ಉಡುಪಿಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತು ವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಮಾಣ ಪತ್ರವನ್ನು ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಮುಖ್ಯ ಆಡಳಿತ ಶಸ್ತ್ರಚಿಕಿತ್ಸಕ ಡಾ.ರೋಬರ್ಟ್ ರೆಬೆಲ್ಲೋ ಅವರಿಗೆ ಹಸ್ತಾಂತರಿಸಿದರು.
ಉಡುಪಿ ಶಾಸಕ ಯಶ್ಪಾಲ್ ಎ.ಸುವರ್ಣ, ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾ ಕುಮಾರಿ, ಜಿಪಂ ಸಿಇಒ ಪ್ರಸನ್ನ ಎಚ್., ಅಪರ ಜಿಲ್ಲಾಧಿಕಾರಿ ಮಮತಾ ದೇವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ, ಜಿಲ್ಲಾ ಆರೋಗ್ಯಾಧಿಕಾರಿ ಎಚ್. ನಾಗಭೂಷಣ ಉಡುಪ ಉಪಸ್ಥಿತರಿದ್ದರು.