ಮಣಿಪಾಲದಲ್ಲಿ ಕಾರು ಅಪಘಾತ: ಕೆಎಂಸಿ ಆಸ್ಪತ್ರೆಯ ವೈದ್ಯ ಮೃತ್ಯು, ಇಬ್ಬರಿಗೆ ಗಾಯ
ಮಣಿಪಾಲದ ರಜತಾದ್ರಿ ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಕಾರು ಅಪಘಾತದಲ್ಲಿ ಮಣಿಪಾಲದ ಕೆಎಂಸಿ ಆಸ್ಪತ್ರೆ ವೈದ್ಯರೊಬ್ಬರು ಮೃತಪಟ್ಟಿದ್ದಾರೆ.
ಉಡುಪಿ, ಜು.1: ಕಾರೊಂದು ಅಪಘಾತಕ್ಕೀಡಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆ ವೈದ್ಯರೊಬ್ಬರು ಮೃತಪಟ್ಟ ಘಟನೆ ಶುಕ್ರವಾರ ತಡರಾತ್ರಿ ಮಣಿಪಾಲದ ರಜತಾದ್ರಿ ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ಸಂಭವಿಸಿರುವುದು ವರದಿಯಾಗಿದೆ.
ವೃತರನ್ನು ಕೆಎಂಸಿ ಆಸ್ಪತ್ರೆಯ ಮೂಳೆ ತಜ್ಞ ಹೈದರಾಬಾದ್ ಮೂಲದ ಡಾ. ಸೂರ್ಯ ನಾರಾಯಣ ಯಾನೆ ಡಾ. ಸೂರಿ(26) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಇನ್ನಿಬ್ಬರು ಗಾಯಗೊಂಡಿದ್ದಾರೆ.
ಶುಕ್ರವಾರ ತಡರಾತ್ರಿ ಒಂದು ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ.
ಮಣಿಪಾಲದ ಹೋಟೆಲ್ ಹಾಟ್ ಆ್ಯಂಡ್ ಸ್ಪೈಸಿ ಎದುರುಗಡೆ ಕಡಿದಾದ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಕಾರು ಮೊದಲು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ನಂತರ ಉರುಳಿಬಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಡಾ.ಸೂರ್ಯನಾರಾಯಣ ಸ್ಥಳದಲ್ಲೇ ಮೃತಪಟ್ಟರು ಎಂದು ತಿಳಿದು ಬಂದಿದೆ.
ಕಾರಿನಲ್ಲಿದ್ದ ಇನ್ನಿಬ್ಬರು ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story