ಕಾರು ಢಿಕ್ಕಿ: ರಿಕ್ಷಾ ಚಾಲಕ ಮೃತ್ಯು
ಹಿರಿಯಡ್ಕ, ಅ.26: ಕಾರೊಂದು ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಮೃತಪಟ್ಟ ಘಟನೆ ಅ.25ರಂದು ಮಧ್ಯಾಹ್ನ ವೇಳೆ ಪೆರ್ಡೂರು ಗ್ರಾಮದ ಬಾಳೆಬೈಲು ಬಸ್ ನಿಲ್ದಾಣದ ಬಳಿ ನಡೆದಿದೆ.
ಮೃತರನ್ನು ರಿಕ್ಷಾ ಚಾಲಕ ಬುಕ್ಕಿಗುಡ್ಡೆಯ ವಿಘ್ನೇಶ್ ಎಂದು ಗುರುತಿಸಲಾಗಿದೆ. ಪೆರ್ಡೂರಿನಿಂದ ಕುಕ್ಕೆಹಳ್ಳಿ ಕಡೆಗೆ ಹೋಗು ತ್ತಿದ್ದ ಅಟೋ ರಿಕ್ಷಾಕ್ಕೆ ಹಿಂದಿನಿಂದ ಬಂದ ಓಮ್ನಿ ಕಾರು ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಿಕ್ಷಾದ ಅಡಿಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ವಿಘ್ನೇಶ್, ಮಣಿಪಾಲ ಆಸ್ಪತ್ರೆಗೆ ಸಾಗಿಸುವ ದಾರಿ ಮದ್ಯೆ ಮೃತಪಟ್ಟರು ಎಂದು ತಿಳಿದು ಬಂದಿದೆ. ಅಪಘಾತದಿಂದ ಕಾರು ಚಾಲಕ ಕೂಡ ಗಾಯಗೊಂಡಿದ್ದಾರೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story