ದೋಣಿಯೊಳಗೆ ಕುಸಿದು ಬಿದ್ದು ಮೃತ್ಯು
ಬೈಂದೂರು : ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ದೋಣಿ ಯಲ್ಲಿಯೇ ಕುಸಿದು ಬಿದ್ದು ಮೀನುಗಾರ ರೊಬ್ಬರು ಮೃತಪಟ್ಟ ಘಟನೆ ಸೆ.8ರಂದು ಬೆಳಗಿನ ಜಾವ ನಡೆದಿದೆ.
ಮೃತರನ್ನು ರಾಮಕೃಷ್ಣ (54) ಎಂದು ಗುರುತಿಸಲಾಗಿದೆ. ಇವರು ಉಪ್ಪುಂದ ಓಲಗ ಮಂಟಪದಿಂದ ಸಮುದ್ರಕ್ಕೆ ಮೀನುಗಾರಿಕೆ ದೋಣಿಯಲ್ಲಿ ಹೋಗಿದ್ದು, ಸುಮಾರು 13 ನಾಟಿಕಲ್ ಮೈಲು ದೂರದಲ್ಲಿ ಬಲೆಯನ್ನು ಎಳೆಯುತ್ತಿರುವಾಗ ರಾಮಕೃಷ್ಣ ದೋಣಿಯೊಳಗೆ ಕುಸಿದು ಬಿದ್ದರೆನ್ನ ಲಾಗಿದೆ. ಇದರಿಂದ ತೀವ್ರವಾಗಿ ಅಸ್ವಸ್ಥಗೊಂಡ ರಾಮಕೃಷ್ಣ ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story