ವಿದ್ಯಾರ್ಥಿಗಳಿಗೆ ಸುಜ್ಞಾನ ನಿಧಿ ಶಿಷ್ಯವೇತನ ವಿತರಣೆ
ಉಡುಪಿ, ಆ.12: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಉಡುಪಿ ತಾಲೂಕು ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಉಡುಪಿ ಇವುಗಳ ಜಂಟಿ ಆಶ್ರಯದಲ್ಲಿ ಸುಜ್ಞಾನ ನಿಧಿ ಶಿಷ್ಯ ವೇತನ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮವು ಅಂಬಲಪಾಡಿ ಪ್ರಗತಿ ಸೌಧ ಸಭಾಂಗಣದಲ್ಲಿ ಜರಗಿತು.
ಕಾರ್ಯಕ್ರಮವನ್ನು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಉದ್ಘಾಟಿಸಿ ದರು. ಈ ಸಂದರ್ಭದಲ್ಲಿ ಪ್ರಸ್ತುತ ವರ್ಷ ಸುಜ್ಞಾನ ನಿಧಿ ಮಂಜೂರಾಗಿದ 110 ವಿದ್ಯಾರ್ಥಿಗಳಿಗೆ ಮಂಜೂರಾತಿ ಪತ್ರ ವಿತರಿಸಲಾಯಿತು. ನಿರ್ದೇಶಕ ಶಿವರಾಯ ಪ್ರಭು ಯೋಜನೆಯ ವಿವಿಧ ಕಾರ್ಯಕ್ರಮಗಳ ಪರಿಚಯ ಮತ್ತು ಅದರಲ್ಲಿನ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.
ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ್ ಕಾಮತ್ ಮಾತನಾಡಿದರು. ಉಡುಪಿ ತಾಲೂಕಿನ ಜನಜಾಗೃತಿ ವೇದಿಕೆ ಅಧ್ಯಕ್ಷ ಸತ್ಯಾನಂದ್ ನಾಯಕ್, ಜಿಲ್ಲಾ ಸಮಿತಿ ಸದಸ್ಯ ಶಿವಕುಮಾರ್, ಕರಾವಳಿ ಪ್ರಾದೇಶಿಕ ವ್ಯಾಪ್ತಿಯ ಆಡಳಿತ ಯೋಜನಾಧಿ ಕಾರಿ ಪುರಂದರ, ಕಚೇರಿ ತಪಾಸಣಾ ಯೋಜನಾಧಿಕಾರಿ ಅಮರ್ ಪ್ರಸಾದ್, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಕವಿತಾ, ವಿಚಕ್ಷಣಾಧಿಕಾರಿ ಸರಸ್ವತಿ ಉಪಸ್ಥಿತರಿದ್ದರು.
ಅಧ್ಯಕ್ಷತೆಯನ್ನು ಕೇಂದ್ರ ಸಮಿತಿ ಒಕ್ಕೂಟದ ಉಡುಪಿ ತಾಲೂಕು ಅಧ್ಯಕ್ಷೆ ಶಮಿತಾ ಪಿ.ಶೆಟ್ಟಿ ವಹಿಸಿದ್ದರು. ಉಡುಪಿ ತಾಲೂಕಿನ ಯೋಜನಾಧಿಕಾರಿ ರಾಮ ಎಂ. ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ನಿಟ್ಟೂರು ಸೇವಾ ಪ್ರತಿನಿಧಿ ಗೀತಾ ಪಾಲನ್ ವಂದಿಸಿದರು. ಮೇಲ್ವಿಚಾರಕಿ ಪ್ರೇಮಾ ಕಾರ್ಯಕ್ರಮ ನಿರೂಪಿಸಿದರು.