Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ದೀಪಾವಳಿ ಆಚರಣೆ| ಹಸಿರು ಪಟಾಕಿ ಬಳಕೆಗೆ...

ದೀಪಾವಳಿ ಆಚರಣೆ| ಹಸಿರು ಪಟಾಕಿ ಬಳಕೆಗೆ ಮಾತ್ರ ಅವಕಾಶ: ಉಡುಪಿ ಡಿಸಿ ವಿದ್ಯಾಕುಮಾರಿ

ರಾತ್ರಿ 8ರಿಂದ 10ರವರೆಗೆ ಮಾತ್ರ ಪಟಾಕಿ ಸಿಡಿಸಲು ಅನುಮತಿ

ವಾರ್ತಾಭಾರತಿವಾರ್ತಾಭಾರತಿ30 Oct 2024 9:31 PM IST
share
ದೀಪಾವಳಿ ಆಚರಣೆ| ಹಸಿರು ಪಟಾಕಿ ಬಳಕೆಗೆ ಮಾತ್ರ ಅವಕಾಶ: ಉಡುಪಿ ಡಿಸಿ ವಿದ್ಯಾಕುಮಾರಿ

ಉಡುಪಿ, ಅ.30: ಜಿಲ್ಲೆಯಲ್ಲಿ ಪ್ರತಿ ವರ್ಷದಂತೆ ಈ ಬಾರಿಯ ದೀಪಾವಳಿ ಹಬ್ಬವನ್ನು ಆಚರಿಸುವ ಸಮಯದಲ್ಲಿ ರಾಜ್ಯ ಸರಕಾರದ ಸೂಚನೆಯಂತೆ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು. ಎಲ್ಲಾ ಮಳಿಗೆ ಹಾಗೂ ಗೋದಾಮುಗಳಲ್ಲಿ ಹಸಿರು ಪಟಾಕಿ ಹೊರತುಪಡಿಸಿ, ನಿಷೇಧಿತ ಪಟಾಕಿಗಳನ್ನು ದಾಸ್ತಾನು ಮಾಡುವಂತಿಲ್ಲ ಎಂದು ಜಿಲ್ಲಾಡಳಿತ ಪ್ರಕಟಣೆ ತಿಳಿಸಿದೆ.

ಕಿರಿದಾದ ಜನನಿಬಿಡ ಮತ್ತು ವಾಣಿಜ್ಯ ಸಂಕೀರ್ಣಗಳ ಸ್ಥಳಗಳಲ್ಲಿ ಯಾವುದೇ ಖಾಯಂ ಅಂಗಡಿ ಅಥವಾ ಕಟ್ಟಡಗಳಲ್ಲಿ ಚಿಲ್ಲರೆ ಪಟಾಕಿ ಮಾರಾಟ ಮಳಿಗೆಗಳನ್ನು ತೆರೆಯಲು, ಪಟಾಕಿಗಳ ದಾಸ್ತಾನು ಹಾಗೂ ಮಾರಾಟಕ್ಕೆ ಅನುಮತಿ ಇರುವುದಿಲ್ಲ.

ಸ್ಥಳೀಯ ಹಾಗೂ ಹೊರ ರಾಜ್ಯಗಳಿಂದ ಅನಧಿಕೃತವಾಗಿ ಯಾವುದೇ ರೀತಿಯ ನಿಷೇಧಿತ ಪಟಾಕಿಗಳನ್ನು ಸಾಗಾಟ ಮಾಡುತ್ತಿದ್ದಲ್ಲಿ ಕೂಡಲೇ ವಾಣಿಜ್ಯ ತೆರಿಗೆ ಇಲಾಖೆಯ ವತಿಯಿಂದ ರಾಜ್ಯದ ಗಡಿಗಳಲ್ಲಿರುವ ತನಿಖಾ ಠಾಣೆಗಳ ಮೂಲಕ ನಿಷೇದಿತ ಪಟಾಕಿಗಳು ಹಾಗೂ ಸಂಬಂಧಿತ ವಸ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಹಾಗೂ ಸಾಗಾಣೆ ಮಾಡುವ ವಾಹನ ಗಳನ್ನು ಸಹ ಸಾರಿಗೆ ಇಲಾಖೆಯಿಂದ ಮುಟ್ಟುಗೋಲು ಹಾಕಿಕೊಳ್ಳಲಾಗುತ್ತದೆ.

ಪಟಾಕಿಗಳನ್ನು ಸರಕಾರದ ಅಧಿಕಾರಿಗಳು ನಿಗದಿಪಡಿಸಿದ ತೆರೆದ ಪ್ರದೇಶ ಗಳಲ್ಲಿ ಸ್ಥಳೀಯ ಆಡಳಿತದಿಂದ ಅನುಮತಿ ನೀಡಲಾಗಿರುವ ತಾತ್ಕಾಲಿಕ ಮಳಿಗೆಗಳಲ್ಲಿ ಮಾತ್ರ ದಾಸ್ತಾನು ಮಾಡಲು ಹಾಗೂ ಮಾರಾಟ ಮಾಡಲು ಅನುಮತಿ ನೀಡಲಾಗಿದೆ.

ದೇಶದ ಸರ್ವೋಚ್ಛ ನ್ಯಾಯಾಲಯವು ರಾತ್ರಿ 8 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ಸಿಡಿ ಸಲು ಅವಕಾಶ ನೀಡಿದ್ದು, ಉಳಿದ ಸಮಯದಲ್ಲಿ ಪಟಾಕಿಗಳನ್ನು ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಮಕ್ಕಳು ಪಟಾಕಿ ಸಿಡಿಸುವ ಸಂದರ್ಭದಲ್ಲಿ ಪೋಷಕರು ಜೊತೆಗಿದ್ದು, ಯಾವುದೇ ಅನಾಹುತ ಉಂಟಾಗದಂತೆ ಕಾಳಜಿ ವಹಿಸಬೇಕು. ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ಯಾವುದೇ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ಸಹ ನಿಷೇಧಿಸಲಾಗಿದೆ.

ತಾತ್ಕಾಲಿಕ ಪಟಾಕಿ ಮಳಿಗೆಗಳನ್ನು ತೆರೆಯುವವರು ಕಟ್ಟುನಿಟ್ಟಾಗಿ ಪಾಲಿಸ ಬೇಕಾದ ಕ್ರಮಗಳು:

*ಮಳಿಗೆಗಳ ಎರಡು ಕಡೆಯಿಂದ ಸರಾಗವಾಗಿ ಗಾಳಿಯಾಡುವಂತಿರ ಬೇಕು. ಮಳಿಗೆಗಳನ್ನು ನಿರ್ಮಿಸಲು ಉಪಯೋಗಿ ಸುವ ಸಾಮಗ್ರಿಗಳು ಸುಲಭವಾಗಿ ಬೆಂಕಿ ಹತ್ತಿಕೊಳ್ಳುವ ರೀತಿಯದ್ದಾಗಿರಬಾರದು. ಸಾಧ್ಯವಾದಷ್ಟೂ ಬೆಂಕಿಯನ್ನು ತಡೆಯುವ ಸಾಮಾಗ್ರಿಗಳನ್ನೇ ನಿರ್ಮಾಣಕ್ಕೆ, ಉಪಯೋಗಿಸ ಬೇಕು.

*ಪ್ರತಿಯೊಂದು ಮಳಿಗೆಗೆ ಮುಂಭಾಗದಿಂದ ಹಾಗೂ ಹಿಂಭಾಗದಿಂದ ಪ್ರವೇಶಿಸುವ ವ್ಯವಸ್ಥೆ ಇರಬೇಕು. ಇದರಿಂದ ಅಪಘಾತ ಸಂದರ್ಭ ಮಳಿಗೆಗಳನ್ನು ಪರಿಸ್ಥಿತಿಗನುಗುಣವಾಗಿ ಪ್ರವೇಶಿಸಿ ಒಳಗಿದ್ದವರನ್ನು ರಕ್ಷಿಸಬಹುದು ಹಾಗೂ ಅವಶ್ಯಕತೆ ಬಿದ್ದರೆ ಮಳಿಗೆಗಳನ್ನು ಒಡೆದು ಒಳ ಪ್ರವೇಶಿಸಬಹುದು.

*ಪ್ರತಿಯೊಂದು ಮಳಿಗೆಗಳ ಗಾತ್ರ 10X10 ಚದರ ಅಡಿ ವಿಸ್ತೀರ್ಣಕ್ಕೆ ಸೀಮಿತಗೊಳಿಸಿರಬೇಕು ಮತ್ತು ಯಾವುದೇ ಹೆಚ್ಚಿನ ಮಿತಿಮೀರಿದ ದಾಸ್ತಾನಿನ ವ್ಯವಸ್ಥೆ ಇರಬಾರದು. ಮಳಿಗೆಯಲ್ಲಿ ಒಂದು 9 ಲೀಟರ್ ಸಾರ್ಮಥ್ಯದ ವಾಟರ್ ಫೈಜರ್ ಮಾದರಿ ಅಗ್ನಿನಂದಕ ಹಾಗೂ ಎರಡು ಬಕೆಟ್ ನೀರನ್ನು ಇರಿಸಬೇಕು ಹಾಗೂ ಮಳಿಗೆಯ ಪಕ್ಕದಲ್ಲಿ ಎರಡು ಡ್ರಮ್‌ನಲ್ಲಿ ಕನಿಷ್ಠ 400 ಲೀಟರ್ ನೀರನ್ನು ಶೇಖರಿಸಿಟ್ಟಿರಬೇಕು.

*ಮಳಿಗೆಯಲ್ಲಿ ಅಡಿಗೆ ಅಥವಾ ಧೂಮಪಾನಕ್ಕೆ ಅವಕಾಶ ನೀಡಬಾರದು ಎಂಬಂತೆ ಸೂಚನಾ ಫಲಕವನ್ನು ಹಾಕಬೇಕು. ಪಟಾಕಿಯನ್ನು ಹಗಲಿನ ವೇಳೆಯಲ್ಲಿ ಮಾತ್ರ ಮಾರಾಟ ಮಾಡಬೇಕು. ರಾತ್ರಿ ವೇಳೆ ಮಳಿಗೆಯಲ್ಲಿ ಯಾರು ಮಲಗ‌ ಬಾರದು. ಪಟಾಕಿ ಮಳಿಗೆಗಳಲ್ಲಿ ಪಟಾಕಿಗಳನ್ನು ಪೂರ್ವಾಹ್ನ 6 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಮಾರಾಟ ಮಾಡಬಹುದಾಗಿದೆ.

ದೀಪಾವಳಿ ಸಮಯದಲ್ಲಿ ಉತ್ಪಾದನೆಯಾಗುವಂತ ಘನತ್ಯಾಜ್ಯದ ವೈಜ್ಞಾನಿಕ ವಿಲೇವಾರಿಗೆ ಸೂಕ್ತ ಕ್ರಮ ಜರಗಿಸಲು ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X