ಮನೆ-ಮನೆ ಸಮೀಕ್ಷೆ: ಸಾರ್ವಜನಿಕರಿಗೆ ಸೂಚನೆ
ಉಡುಪಿ, ಆ.13: ಪ್ರಸಕ್ತ ಸಾಲಿನಲ್ಲಿ ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಗುರುತಿಸಿ ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಮನೆ-ಮನೆ ಸಮೀಕ್ಷೆಯನ್ನು ಪ್ರಾರಂಭಿಸಲಾಗಿದೆ. ಸದರಿ ಸರ್ವೆ ಕಾರ್ಯದಲ್ಲಿ ಉಡುಪಿ ನಗರಸಭೆಯ ಸಿಬ್ಬಂದಿಗಳು, ಸ್ವಯಂ ಸೇವಕರು, ಅಂಗನವಾಡಿ ಕಾರ್ಯಕರ್ತೆಯರು, ಆಶಾಕಾರ್ಯಕರ್ತೆಯರು, ಸಂಸ್ಥೆಯ ಸದಸ್ಯರು ಹಾಗೂ ನಗರಸಭೆ ನಿಯೋಜಿಸಿದ ಸಿಬ್ಬಂದಿಗಳು ಭಾಗವಹಿಸಲಿದ್ದಾರೆ.
ಇವರು ಮನೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಾರ್ವಜನಿಕರು ತಮ್ಮ ಕುಟುಂಬದ ಎಲ್ಲಾ ಸದಸ್ಯರ ಪಡಿತರ ಚೀಟಿ, ಆಧಾರ್ ಕಾರ್ಡ್ ಮತ್ತು ಮಕ್ಕಳ ಜನನ ಪ್ರಮಾಣ ಪತ್ರವನ್ನು ನೀಡಿ ಸರ್ವೆ ಕಾರ್ಯದಲ್ಲಿ ನಗರಸಭೆ ಯೊಂದಿಗೆ ಸಹಕರಿಸುವಂತೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.
Next Story