ವಾಲ್ಮೀಕಿ ಆದರ್ಶ ಜೀವನದಲ್ಲಿ ಅಳವಡಿಸಿಕೊಳ್ಳಿ: ಕಿರಣ್ ಕೊಡ್ಗಿ

ಕುಂದಾಪುರ: ರಾಮಾಯಣ ಮಹಾಕಾವ್ಯ ರಚನೆ ಮೂಲಕ ಆದರ್ಶದ ಮಾರ್ಗ ತೋರಿಸಿದ ವಾಲ್ಮಿಕಿ ಜಯಂತಿ ಆಚರಣೆ ದಿನಕ್ಕೆ ಸೀಮಿತವಾಗದೆ ಅವರ ನಡೆದ ಬಂದ ದಾರಿ ನೆನಪು ಮಾಡಿಕೊಂಡು ಜೀವನದಲ್ಲಿ ಆದರ್ಶ ಅಳವಡಿಸಿಕೊಳ್ಳಬೇಕು. ಇದುವೇ ಜಯಂತಿ ಆಚಣೆಯ ಉದ್ದೇಶವಾಗಬೇಕು ಎಂದು ಕುಂದಾಪುರ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಹೇಳಿದ್ದಾರೆ.
ಕುಂದಾಪುರ ತಾಲೂಕು ಆಡಳಿತ, ತಾಪಂ, ಪುರಸಭೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಸಂಘಟನೆ ಆಶ್ರಯದಲ್ಲಿ ಕುಂದಾಪುರ ತಾಪಂ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಶನಿವಾರ ಆಯೋಜಿಸ ಲಾದ ಶ್ರೀಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಕುಂದಾಪುರ ತಹಶಿಲ್ದಾರ್ ಶೋಭಾಲಕ್ಷ್ಮೀ ಮಾತನಾಡಿದರು. ಕುಂದಾಪುರ ಡಾ.ಬಿ.ಬಿ.ಹೆಗ್ಡೆ ಪದವಿ ಕಾಲೇಜು ಉಪನ್ಯಾಸಕ ರಕಿತ್ ರಾವ್ ಶ್ರೀಮಹರ್ಷಿ ವಾಲ್ಮೀಕಿ ಕುರಿತು ಉಪನ್ಯಾಸ ಮಾಡಿದರು. ಪುರಸಭೆ ಸದಸ್ಯ ಪ್ರಭಾಕರ ವಿ., ಮುಖ್ಯಾಧಿಕಾರಿ ಮಂಜುನಾಥ ಆರ್., ದಸಂಸ ಭೀಮ ಘರ್ಜನೆ ರಾಜ್ಯ ಸಂಚಾಲಕ ಉದಯ ಕುಮಾರ್ ತಲ್ಲೂರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಎಸ್ಸೆಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಅತೀಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕುಂದಾಪುರ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಾಘವೇಂದ್ರ ಆರ್.ವರ್ಣೇಕರ್ ಸ್ವಾಗತಿಸಿ ದರು. ಮೆಟ್ರಿಕ್ ಪೂರ್ವ ಬಾಲಕಿಯರ ನಿಲಯ ವಾರ್ಡನ್ ರಾಧಿಕಾ ರಾಣಿ ಕಾರ್ಯಕ್ರಮ ನಿರೂಪಿಸಿದರು. ಸಮಾಜ ಕಲ್ಯಾಣ ಇಲಾಖೆ ಮೆನೇಜರ್ ರಮೇಶ್ ಕುಲಾಲ್ ವಂದಿಸಿದರು.