ಬಾಲ್ಯ ವಿವಾಹಕ್ಕೆ ಸಹಕರಿಸುವ ಪ್ರತಿಯೊಬ್ಬರೂ ತಪ್ಪಿತಸ್ಥರು: ಶ್ರೀನಿವಾಸ ಸುವರ್ಣ
ಉಡುಪಿ : ಬಾಲ್ಯ ವಿವಾಹ ತಡೆಕಟ್ಟುವಿಕೆ ಪ್ರತಿಯೊಬ್ಬ ನಾಗರೀಕನ ಮೂಲಭೂತ ಕರ್ತವ್ಯವಾಗಿದೆ. ಬಾಲ್ಯ ವಿವಾಹ ದಂತಹ ಸಾಮಾಜಿಕ ಪಿಡುಗು ವಿಗೆ ಸಹಕರಿಸುವ ಪ್ರತಿಯೊಬ್ಬರೂ ತಪ್ಪಿತಸ್ಥರಾಗುತ್ತಾರೆ. ಇವರಿಗೆ ಕಾನೂನಿನಲ್ಲಿ ಶಿಕ್ಷೆ ಇದೆ ಎಂದು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ವಿಶೇಷ ಪೋಕ್ಸೊ ನ್ಯಾಯಾ ಲಯದ ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಹೇಳಿದ್ದಾರೆ.
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಉಡುಪಿ ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿ ಕಾರ, ಉಡುಪಿ ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಹಿಳಾ ಸಂಘ ಮತ್ತು ಅಜ್ಜರಕಾಡು ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನಲ್ಲಿ ನಡೆದ ಬಾಲ್ಯ ವಿವಾಹ ಮುಕ್ತ ಕರ್ನಾಟಕ ಸುರಕ್ಷಿತ ಬಾಲ್ಯ /ಸುರಕ್ಷಿತ ಕರ್ನಾಟಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಮಕ್ಕಳ ಹೆತ್ತವರು, ಪೋಷಕರು ಮತ್ತು ಸಮಾಜದ ಜವಾಬ್ದಾರಿಯುತ ನಾಗರಿಕ ರೆಲ್ಲರೂ ಒಟ್ಟಾಗಿ ರಾಜ್ಯವನ್ನು ಬಾಲ್ಯ ವಿವಾಹ ಮುಕ್ತ ರಾಜ್ಯ ವ್ನನಾಗಿಸಲು ಪ್ರಯತ್ನಿಸಬೇಕು ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್. ಮಾತನಾಡಿ, ಜವಾಬ್ದಾರಿಯುತ ಸಮಾಜದ ಭಾಗವಾಗಿರುವ ನಾವು ಬಾಲ್ಯ ವಿವಾಹದಂತಹ ಅನಿಷ್ಟ ಪದ್ದತಿ ಯಿಂದಾಗುವ ಪರಿಣಾಮಗಳನ್ನು ಅರಿತು ಜಾಗರೂಕರಾಗಬೇಕು. ಮಕ್ಕಳ ರಕ್ಷಣೆ ಮತ್ತು ಅವರ ಭವಿಷ್ಯಕ್ಕೆ ಒಂದು ಸುಂದರ ಸಮಾಜವನ್ನು ನಿರ್ಮಿಸುವ ನೈತಿಕ ಹೊಣೆಗಾರಿಕೆ ಎಲ್ಲ ಪ್ರಜ್ಞಾವಂತ ನಾಗರಿಕರದ್ದಾಗಿದೆ ಎಂದರು.
ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ.ಭಾಸ್ಕರ ಶೆಟ್ಟಿ ಎಸ್. ವಹಿಸಿದ್ದರು. ಬಾಲ್ಯ ವಿವಾಹ ಮುಕ್ತ ಕರ್ನಾಟಕ ಸುರಕ್ಷಿತ ಬಾಲ್ಯ/ಸುರಕ್ಷಿತ ಕರ್ನಾಟಕದ ಕುರಿತ ಪ್ರತಿಜ್ಞೆಯನ್ನು ತೆಗೆದುಕೊಳ್ಳಲಾಯಿತು. ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ರೊನಾಲ್ಡ್ ಬಿ.ಪುರ್ಟಾಡೊ, ಹಿರಿಯ ಮಕ್ಕಳ ಪೋಲೀಸ್ ಕಲ್ಯಾಣಾಧಿಕಾರಿ ದಿನಕರ ಪಿ.ಕೆ., ನ್ಯಾಯವಾದಿ ಅಖಿಲ್ ಹೆಗ್ಡೆ, ಕಾಲೇಜಿನ ಮಹಿಳಾ ಸಂಘದ ಸಂಚಾಲಕ ಜಯಮಂಗಳ ಮತ್ತು ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಡಾ.ವಾಣಿ ಆರ್. ಬಲ್ಲಾಳ್ ಉಪಸ್ಥಿತರಿದ್ದರು. ಉಡುಪಿ ಮಕ್ಕಳ ರಕ್ಷಣಾ ಘಟಕದ ಸುರಕ್ಷಾ ಸ್ವಾಗತಿಸಿ, ವಂದಿಸಿದರು. ಶರಣ್ಯ ಭಟ್ ಕಾರ್ಯಕ್ರಮ ನಿರೂಪಿಸಿದರು.