ಫೆಲೋಶಿಪ್ ಸೌಲಭ್ಯ: ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ
ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೇಂದ್ರ ಸರಕಾರದ ಶಾಸನಬದ್ಧ ಅಂಗಿಕೃತ ವಾದ ವಿಶ್ವವಿದ್ಯಾನಿಲಯಗಳಲ್ಲಿ ಪೂರ್ಣಕಾಲಿಕವಾಗಿ ಎಂಫಿಲ್ ಹಾಗೂ ಪಿಎಚ್ಡಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮತೀಯ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್ ಸಮುದಾಯದ ವಿದ್ಯಾರ್ಥಿಗಳಿಗೆ ನೀಡಲಾಗುವ ಫೆಲೋಶಿಪ್ ಸೌಲಭ್ಯಕ್ಕಾಗಿ ಸೇವಾಸಿಂಧು ತಂತ್ರಾಂಶ - https://sevasindhu.karnataka.gov.in-ನಲ್ಲಿ ಅರ್ಜಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ ೩೧ರವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ: 0820-2573596 ಅನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story