ಮಲ್ಪೆ: ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು
ಸಾಂದರ್ಭಿಕ ಚಿತ್ರ
ಮಲ್ಪೆ: ಮೀನುಗಾರಿಕೆ ಮಾಡುತ್ತಿರುವಾಗ ಮೀನುಗಾರರೊಬ್ಬರು ಸಮುದ್ರಕ್ಕೆ ಬಿದ್ದು ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಕೇರಳದ ರಾಜನ್(54) ಎಂದು ಗುರುತಿಸಲಾಗಿದೆ. ಮಲ್ಪೆ ಬಾಲಕರ ಶ್ರೀರಾಮ ಭಜನಾಮಂದಿರದ ಎದುರು ಸಮುದ್ರದಲ್ಲಿ ಫೆ.7ರಂದು ಮೀನುಗಾರಿಕೆ ಮಾಡುತ್ತಿರುವಾಗ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ನಾಪತ್ತೆಯಾಗಿದ್ದರು.
ಹುಡುಕಾಡಿದಾಗ ಅವರ ಮೃತದೇಹವು ಫೆ.8ರಂದು ಬೆಳಗಿನ ಜಾವ ಮಲ್ಪೆಪಡುಕೆರೆ ಸಮುದ್ರ ತೀರದಲ್ಲಿ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story