ಕೋಡಿ ಪದವಿ ಪೂರ್ವ ಕಾಲೇಜಿನ ರಕ್ಷಕ-ಶಿಕ್ಷಕ ಸಂಘ ರಚನೆ
ಕುಂದಾಪುರ : ಕೋಡಿ ಹಾಜಿ ಕೆ.ಮೊಹಿದ್ದೀನ್ ಬ್ಯಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ 2023-24ನೇ ಸಾಲಿನ ’ರಕ್ಷಕ - ಶಿಕ್ಷಕ ಸಂಘ’ ರಚನೆಗೊಂಡಿತು.
ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಡಾ.ಸದಾನಂದ ಬೈಂದೂರ್ ಮಾತನಾಡಿ, ಮಕ್ಕಳಿಗಾಗಿ ಆಸ್ತಿ ಮಾಡಬೇಡಿ: ಮಕ್ಕಳನ್ನು ದೇಶದ ಆಸ್ತಿ ಮಾಡಿ, ಮಕ್ಕಳಿಗಾಗಿ ಪೋಷಕರು ಸ್ವಲ್ಪ ಸಮಯವನ್ನು ಮೀಸಲಿಡಬೇಕು ಎಂದು ಹೇಳಿದರು.
ವಿಜ್ಞಾನ ವಿಭಾಗದ ಮುಖ್ಯಸ್ಥೆ ಡಾ.ಪೂರ್ಣಿಮಾ ಶೆಟ್ಟಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಪ್ರಮುಖ ಸಿಇಟಿ ನೀಟ್ ಕುರಿತು ಸಮಗ್ರ ಮಾಹಿತಿಯನ್ನು ನೀಡಿದರು. ಅಧ್ಯಕ್ಷತೆಯನ್ನು ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಹಾಜಿ ಕೆ.ಎಂ.ಅಬ್ದುಲ್ ರೆಹಮಾನ್ ವಹಿಸಿದ್ದರು.
ರಕ್ಷಕ ಶಿಕ್ಷಕ ಸಂಘದ ನೂತನ ಅಧ್ಯಕ್ಷರಾಗಿ ಬಿ.ಎಚ್.ಹಾರೂನ್, ಉಪಾಧ್ಯಕ್ಷರ ರಾಗಿ ಶಾಹಿರಾ, ಸದಸ್ಯರಾಗಿ ಸಿದ್ದೀಕ್, ಉಬೈದ್, ಶರೀಫ್ ಅಬ್ದುಲ್ ರೆಹಮಾನ್, ರೇಖಾ ಗೌಡರ್, ಸೌದಾ ಆಯ್ಕೆಯಾದರು.
ವಿಶ್ವಸ್ಥ ಮಂಡಳಿ ಸದಸ್ಯ ಡಾ.ಆಸೀಫ್ ಬ್ಯಾರಿ ಪ್ರಾಸ್ತಾವಿಕವಾಗಿ ಮಾತನಾಡಿ ದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ಸುರೇಶ್ ಶೆಟ್ಟಿ ಸ್ವಾಗತಿಸಿ, ಆಂಗ್ಲ ಉಪನ್ಯಾಸಕಿ ಝಿಯಾನ ವಂದಿಸಿದರು. ಕನ್ನಡ ಉಪನ್ಯಾಸಕ ಡಾ. ಸಂದೀಪ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.