ಹೂಡೆ ಸಾಲಿಹಾತ್ ಶಾಲೆಯ ವಿದ್ಯಾರ್ಥಿ ಸರಕಾರ ರಚನೆ
ಉಡುಪಿ, ಆ.14: ಹೂಡೆಯ ಸಾಲಿಹಾತ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ಸರಕಾರ ರಚನೆಯ ಉದ್ಘಾಟನಾ ಸಮಾರಂಭ ಇತ್ತೀಚೆಗೆ ನಡೆಯಿತು.
ವಿದ್ಯಾರ್ಥಿ ಸರಕಾರವನ್ನು ಉದ್ಘಾಟಿಸಿದ ರಾಯಚೂರು ಎ.ಜೆ. ಅಕಾಡೆಮಿ ನಿರ್ದೇಶಕ ಅಬ್ದುಲ್ಲಾ ಜಾವೀದ್ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳುವುದು ಅಗತ್ಯ. ವಿದ್ಯಾರ್ಥಿಯಾಗಿ ಇರುವಾಗಲೇ ಪ್ರಸಕ್ತ ರಾಜಕೀಯ ಸನ್ನಿವೇಶಗಳ ಜ್ಞಾನ ಪಡೆದು ಕೊಂಡರೆ ಮುಂದೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಕ್ರಿಯವಾಗಿ ಭಾಗವಹಿಸಲು ಅನುಕೂಲಕರ ವಾಗುತ್ತದೆ ಎಂದು ತಿಳಿಸಿದರು.
ವಿದ್ಯಾರ್ಥಿ ಸರ್ಕಾರದ ಪ್ರತಿನಿಧಿಗಳಿಗೆ ಪ್ರಮಾಣವಚನವನ್ನು ಅನಿಮುದ್ದಿನ್ ಅಕ್ತರ್ ಬೋಧಿಸಿದರು. ವೇದಿಕೆಯಲ್ಲಿ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಸ್ಲಂ ಹೈಕಾಡಿ, ಮುಖ್ಯೋಪಾಧ್ಯಾಯಿನಿ ಸುನಂದ ಉಪಸ್ಥಿತರಿದ್ದರು. ಶಿಕ್ಷಕಿ ಶೈಲಾ ಡಿಸೋಜ ಕಾರ್ಯಕ್ರಮ ನಿರ್ವಹಿಸಿ, ಶಿಕ್ಷಕಿ ತಸೀನ ವಂದಿಸಿದರು.
Next Story