Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ‘ಗಾಂಧೀಜಿ ವಿಚಾರ, ತತ್ವ, ಆದರ್ಶ...

‘ಗಾಂಧೀಜಿ ವಿಚಾರ, ತತ್ವ, ಆದರ್ಶ ಪ್ರತಿಯೊಬ್ಬರಿಗೂ ಅನುಕರಣೀಯ’

ಉಡುಪಿ: ನಗರಸಭಾ ವತಿಯಿಂದ ಗಾಂಧಿ ಜಯಂತಿ

ವಾರ್ತಾಭಾರತಿವಾರ್ತಾಭಾರತಿ2 Oct 2023 5:19 PM IST
share
‘ಗಾಂಧೀಜಿ ವಿಚಾರ, ತತ್ವ, ಆದರ್ಶ ಪ್ರತಿಯೊಬ್ಬರಿಗೂ ಅನುಕರಣೀಯ’

ಉಡುಪಿ: ಗಾಂಧೀಜಿ ಅವರ ವಿಚಾರ, ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿ ಕೊಂಡು ಪಾಲಿಸಬೇಕು ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಹೇಳಿದ್ದಾರೆ.

ನಗರದ ಅಜ್ಜರಕಾಡು ಭುಜಂಗ ಪಾರ್ಕಿನ ಗಾಂಧಿಕಟ್ಟೆಯಲ್ಲಿ, ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ನಗರಸಭೆ ಉಡುಪಿ ವತಿಯಿಂದ ಆಯೋಜಿಸಲಾದ ಜಿಲ್ಲಾ ಮಟ್ಟದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡುತಿದ್ದರು.

ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಮಾತನಾಡಿ, ಮಹಾತ್ಮ ಗಾಂಧೀಜಿ ಸ್ವಾತಂತ್ರಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು. ದೇಶದ ಮೂಲೆಮೂಲೆಗಳಲ್ಲಿ ಸಂಚರಿಸಿ, ಜನರನ್ನು ಒಗ್ಗೂಡಿಸಿ, ದೇಶಾದ್ಯಂತ ಸ್ವಾತಂತ್ರ್ಯ ಹೋರಾ ಟದ ಕಿಚ್ಚನ್ನು ಹೆಚ್ಚಿಸುವುದರೊಂದಿಗೆ ಅವರು ಭೇಟಿ ನೀಡಿದ ಸ್ಥಳಗಳಲ್ಲಿ ಸ್ವತಹ ಸ್ವಚ್ಛತೆಗೆ ಆದ್ಯತೆ ನೀಡಿದ್ದಾರೆ ಎಂದರು.

ಪ್ಲೇಗ್ ಹರಡಿದ ಸ್ಥಳಗಳಲ್ಲಿ ಜನರನ್ನು ಬೇರೆ ಕಡೆಗೆ ಕಳುಹಿಸಿ ಸ್ವತಹ ಅಲ್ಲಿ ಶೌಚಾಲಯ ಸ್ವಚ್ಛತೆಗೆ ಮುಂದಾಗುತ್ತಾರೆ. ಇದರಿಂದ ಅವರು ಸ್ವಚ್ಛತೆಗೆ ಎಷ್ಟು ಮಹತ್ವ ನೀಡಿದ್ದರು ಎಂಬುದು ತಿಳಿಯುತ್ತದೆ. ಸಾರ್ವಜನಿಕರು ಮೊದಲು ತಮ್ಮ ಮನೆಯ ಕಸವನ್ನು ಸ್ವಚ್ಛಗೊಳಿಸುವ ಸಂಕಲ್ಪ ಮಾಡಬೇಕು. ನಾವು ಎಲ್ಲೆಲ್ಲೊ ಎಸೆದ ಕಸ ಚರಂಡಿಗಳ ಮೂಲಕ ನದಿ ಹಾಗೂ ಸಮುದ್ರವನ್ನು ಸೇರುತ್ತವೆ.ಇದಕ್ಕೆ ಆಸ್ಪದ ನೀಡಬಾರದು ಎಂದರು.

ಉಡುಪಿ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತ್ ವ್ಯಾಪ್ತಿಗಳಲ್ಲಿ ಸಾರ್ವಜನಿಕರು ಮನೆ ಮನೆಗೆ ಕಸ ಸಂಗ್ರಹಿ ಸಲು ಬರುವ ಪೌರಕಾರ್ಮಿಕರಿಗೆ ಹಸಿಕಸ ಹಾಗೂ ಒಣಕಸವನ್ನು ವಿಂಗಡಣೆ ಮಾಡಿ ನೀಡಬೇಕು. ಇದು ಪೌರಕಾರ್ಮಿಕರ ಹಾಗೂ ನಗರಸಭೆಯ ಜವಾಬ್ದಾರಿಯಲ್ಲ. ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿ. ಇದರಿಂದ ಕಸವನ್ನು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಲು ಸಾಧ್ಯವಾಗುತ್ತದೆ ಎಂದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ 154ನೇ ಜಯಂತಿ ಅಂಗವಾಗಿ, ಪ್ರೌಢಶಾಲಾ ವಿಭಾಗ, ಪದವಿ ಪೂರ್ವ ಶಿಕ್ಷಣ ವಿಭಾಗ ಹಾಗೂ ಪದವಿ ಮತ್ತು ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಿಗೆ ಪ್ರಶಸ್ತಿ ಪತ್ರ ಹಾಗೂ ನಗದು ಬಹುಮಾನಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ ಕೆ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ, ನಗರಸಭೆ ಪೌರಾಯುಕ್ತ ರಾಯಪ್ಪ, ನಗರಸಭೆ ಮಾಜಿ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ನಗರಸಭಾ ಸದಸ್ಯರಾದ ಬಾಲಕೃಷ್ಣ ಶೆಟ್ಟಿ ಕೆ, ರಶ್ಮಿ ಭಟ್, ಜಯಂತಿ ಪೂಜಾರಿ ಹಾಗೂ ಇತರರು ಉಪಸ್ಥಿತರಿದ್ದರು.

ಬಾಪೂಜಿ ಪ್ರಬಂಧ ಸ್ಪರ್ಧೆ ವಿಜೇತರು

ಪ್ರೌಢಶಾಲಾ ವಿಭಾಗ: ಉಡುಪಿ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ (ಬೋರ್ಡ್ ಹೈಸ್ಕೂಲ್) ೯ನೇತರಗತಿ ವಿದ್ಯಾರ್ಥಿನಿ ರಕ್ಷಿತಾ ಪ್ರಥಮ, ಕಾರ್ಕಳ ತಾಲೂಕು ಯರ್ಲಪಾಡಿ ಸರಕಾರಿ ಸಂಯುಕ್ತ ಪ್ರೌಢಶಾಲೆಯ ೧೦ನೇ ತರಗತಿ ವಿದ್ಯಾರ್ಥಿನಿ ಶ್ರೇಯಾ ದ್ವಿತೀಯ ಹಾಗೂ ಕುಂದಾಪುರ ತಾಲೂಕು ಕೋಟೇಶ್ವರ ಕೆ.ಪಿ.ಎಸ್ ಪ್ರೌಢ ಶಾಲಾ ವಿಭಾಗದ ೧೦ನೇ ತರಗತಿ ವಿದ್ಯಾರ್ಥಿನಿ ರಶ್ಮಿ ತೃತೀಯ.

ಪದವಿ ಪೂರ್ವ ಶಿಕ್ಷಣ ವಿಭಾಗ: ಉಡುಪಿ ಎಂ.ಜಿ.ಎಂ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ಕಲಾ ವಿಭಾಗದ ದಿವ್ಯಾ ಪ್ರಥಮ, ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಸೌಜನ್ಯ ದ್ವಿತೀಯ, ನಿಟ್ಟೆ ಡಾ. ಎನ್. ಎಸ್. ಎ.ಎಂ. ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ದಕ್ಷಾ ತೃತೀಯ.

ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗ: ಬಸ್ರೂರು ಶ್ರೀಶಾರದಾ ಕಾಲೇಜಿನ ತೃತೀಯ ಬಿ.ಎ ವಿದ್ಯಾರ್ಥಿನಿ ಸ್ವಪ್ನ ಶೇಟ್ ಪ್ರಥಮ, ಶಿರ್ವ ಸಂತ ಮೇರಿ ಕಾಲೇಜಿನ ಹರ್ಷಿತಾ ಯು ಶೆಟ್ಟಿ ದ್ವಿತೀಯ, ಕುಂದಾಪುರ ಕೋಟೇಶ್ವರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ತೃತೀಯ ಬಿ.ಕಾಂ ವಿದ್ಯಾರ್ಥಿನಿ ಅನುಷಾ ಕೆ ಪೂಜಾರಿ ತೃತೀಯ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X