ಲೋಕಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಿ: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ, ಆ.12: ಮುಂದಿನ ಲೋಕಸಭಾ ಚುನಾವಣೆಗೆ ಪಕ್ಷವನ್ನು ಮತ್ತು ಕಾರ್ಯಕರ್ತರನ್ನು ಸಜ್ಜುಗೊಳಿಸುವ ಪ್ರಕ್ರಿಯೆ ದೇಶದಾದ್ಯಂತ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಸಂಸದರನ್ನು ಅತ್ಯಂತ ಹೆಚ್ಚಿನ ಮತಗಳ ಅಂತರದಲ್ಲಿ ಗೆಲ್ಲಿಸಿ ಕೇಂದ್ರಕ್ಕೆ ಕಳುಹಿಸಿಕೊಡುವ ಕಾರ್ಯ ಆಗಬೇಕಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.
ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಶುಕ್ರವಾರ ನಡೆದ ಬಿಜೆಪಿ ಜಿಲ್ಲಾ ಕಾರ್ಯ ತಂಡದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತ ನಾಡುತಿದ್ದರು. ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಪ್ರಕ್ರಿಯೆಯನ್ನು ಅತ್ಯಂತ ನಾಜೂಕಾಗಿ ನಿರ್ವಹಿ ಸುವ ಮೂಲಕ ಮೀಸಲಾತಿಯಡಿ ಪಕ್ಷದ ಬೆಂಬಲಿತ ಕಾರ್ಯಕರ್ತರಿಗೆ ಆದ್ಯತೆ ಮೇರೆಗೆ ಅವಕಾಶ ಸಿಗುವಂತೆ ನೋಡಿಕೊಳ್ಳಬೇಕು ಎಂದರು.
ಬಿಜೆಪಿ ಮಂಗಳೂರು ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಮಾತನಾಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ, ಶಾಸಕರಾದ ಯಶ್ಪಾಲ್ ಎ.ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್, ಬೈಕಾಡಿ ಸುಪ್ರಸಾದ್ ಶೆಟ್ಟಿ, ಪೆರ್ಣಂಕಿಲ ಶ್ರೀಶ ನಾಯಕ್, ಗೀತಾಂಜಲಿ ಸುವರ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಳಾದ ಕುತ್ಯಾರು ನವೀನ್ ಶೆಟ್ಟಿ, ಮನೋಹರ್ ಎಸ್.ಕಲ್ಮಾಡಿ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾಜಿ.ಸುವರ್ಣ, ರಾಜ್ಯ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯ ದರ್ಶಿ ದಿನಕರ ಬಾಬು, ರಾಜ್ಯ ಎಸ್.ಟಿ. ಮೋರ್ಚಾ ಕಾರ್ಯದರ್ಶಿ ಉಮೇಶ್ ನಾಯ್ಕ್ ಉಪಸ್ಥಿತರಿದ್ದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು ಸ್ವಾಗತಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.