ಸೆ.28ರಿಂದ ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ
ಉಡುಪಿ, ಸೆ.27: ಜಿಲ್ಲೆಯಲ್ಲಿ ಮಳೆಯ ಕೊರತೆಯ ಕೂಗು ಕೇಳಿಬರುತ್ತಿರುವಂತೆಯೇ ಸೆ.28ರಿಂದ ಅ.2ರವರೆಗೆ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಿಡಿಲಿನ ಸಹಿತ ಭಾರೀ ಮಳೆಯ ಮುನ್ಸೂಚನೆಯನ್ನು ನೀಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ 64.5ಮಿ.ಮೀ.ನಿಂದ 115.5ಮಿ.ಮೀ. ಮಳೆಯೊಂದಿಗೆ ಬಿರುಗಾಳಿ, ಗುಡುಗು, ಸಿಡಿಲು ಕಾಣಿಸಿಕೊಳ್ಳಲಿದೆ ಎಂದು ಬೆಂಗಳೂರಿನ ಹವಾಮಾನ ಕೇಂದ್ರ ತಿಳಿಸಿದೆ.
Next Story