ಉಡುಪಿ ಜಿಲ್ಲೆಯಲ್ಲಿ ಕೆಎಸ್ಸಾರ್ಟಿಸಿ ಬಸ್‌ಗಳ ಸಂಖ್ಯೆ ಹೆಚ್ಚಿಸಿ: ಜೆಡಿಎಸ್
ಉಡುಪಿ, ಜು.19: ರಾಜ್ಯ ಸರಕಾರ ಮಹಿಳೆಯರಿಗೆ ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಸಂಚರಿಸುವ ಶಕ್ತಿ ಯೋಜನೆಯನ್ನು ಜಾರಿಗೊಳಿಸಿ ಯಶಸ್ಸು ಗಳಿಸಿದರೂ, ಅದರ ಲಾಭ ಜಿಲ್ಲೆಯ ಮಹಿಳೆಯರಿಗೆ ಸರಿಯಾಗಿ ಪಡೆಯಲು ಸಾದ್ಯವಾಗುತ್ತಿಲ್ಲ ಎಂದು ಜಾತ್ಯತೀತ ಜನತಾ ದಳದ ಜಿಲ್ಲಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಹೇಳಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಕೆಲವೇ ಕೆಲವು ಬಸ್ಸುಗಳು ಓಡಾಡುತ್ತಿದ್ದು, ಇದರಿಂದ ಉಡುಪಿ ಜಿಲ್ಲೆಯ ಪ್ರಯಾಣಿಕರು ಯೋಜನೆಯ ಸಂಪೂರ್ಣ ಲಾಭ ಪಡೆಯುವು ದರಿಂದ ವಂಚಿತರಾಗಿದ್ದಾರೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಉಡುಪಿ-ಮಂಗಳೂರು, ಮಂಗಳೂರು-ಉಡುಪಿ ನಡುವೆ ಹಾಗೂ ಇತರ ಕಡೆಗಳಿಗೆ ಕೆಎಸ್ಸಾರ್ಟಿಸಿ ಬಸ್‌ಗಳು ನಿಯಮಿತವಾಗಿ ನಿಗದಿತ ಸ್ಟಾಪುಗಳ ವ್ಯವಸ್ಥೆಯೊಂದಿಗೆ ಪ್ರಾರಂಭಿಸಿದರೆ ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶದೊಂದಿಗೆ ಸಾರ್ವಜನಿಕರ ಸಂಚಾರಕ್ಕೂ ಅನುಕೂಲವಾಗುತ್ತದೆ ಎಂದು ಯೋಗೀಶ್ ಶೆಟ್ಟಿ ತಿಳಿಸಿದ್ದಾರೆ.
Next Story