Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ʼಕಾಂತರಾಜು ವರದಿʼ ವಂಚಿತವರ್ಗಕ್ಕೆ...

ʼಕಾಂತರಾಜು ವರದಿʼ ವಂಚಿತವರ್ಗಕ್ಕೆ ಸಾಮಾಜಿಕ ನ್ಯಾಯವನ್ನು ಒದಗಿಸುವ ಗುರಿ ಹೊಂದಿದೆ: ಜಯಪ್ರಕಾಶ್ ಹೆಗ್ಡೆ

ವಾರ್ತಾಭಾರತಿವಾರ್ತಾಭಾರತಿ26 March 2024 12:33 PM IST
share
ʼಕಾಂತರಾಜು ವರದಿʼ ವಂಚಿತವರ್ಗಕ್ಕೆ ಸಾಮಾಜಿಕ ನ್ಯಾಯವನ್ನು ಒದಗಿಸುವ ಗುರಿ ಹೊಂದಿದೆ: ಜಯಪ್ರಕಾಶ್ ಹೆಗ್ಡೆ

ಕಾರ್ಕಳ: ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಮಂಡಿಸಿರುವ ಕಾಂತರಾಜು ವರದಿ ಪ್ರಜಾತಂತ್ರ ವ್ಯವಸ್ಥೆಯಡಿ ವಂಚಿತವರ್ಗಕ್ಕೆ ಸಾಮಾಜಿಕ ನ್ಯಾಯವನ್ನು ಒದಗಿಸುವ ಗುರಿ ಹೊಂದಿದೆಯೇ ಹೊರತು, ಸಮಾಜದ ಯಾವುದೇ‌ ವರ್ಗವನ್ನು ಅವಗಣಿಸುವ ಅಸಾಂವಿಧಾನಿಕ ನಿಲುವನ್ನು ಹೊಂದಿಲ್ಲ ಎಂದು ಆಯೋಗದ ಮಾಜಿ ಅಧ್ಯಕ್ಷ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.

ಅವರು ಇಲ್ಲಿನ ವಿಧಾನ ಸಭಾ ವ್ಯಾಪ್ತಿಯ ಪತ್ತೊಂಜಿ ಕಟ್ಟೆಯಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಆಯೋಜಿಸಿರುವ ಕಾರ್ಯಕರ್ತರ ತರಬೇತಿ ಕಾರ್ಯಕ್ರಮದಲ್ಲಿ ಮಾತಾಡುತ್ತಿದ್ದರು.

ಹಿಂದುಳಿದ ವರ್ಗಗಳ ಸಬಲೀಕರಣದ ಗುರಿಯೊಂದಿಗೆ ನಡೆದ ಈ ಆರ್ಥಿಕ ಸಾಮಾಜಿಕ ಶೈಕ್ಷಣಿಕ ಹಿನ್ನೆಲೆಯ ಜಾತಿಗಣತಿ ಕೆಲವೊಂದು ಅಸ್ತಿತ್ವವೇ ಇಲ್ಲದಿದ್ದ ವರ್ಗಕ್ಕೆ ಅಸ್ತಿತ್ವವನ್ನು ನೀಡುವ, ಧ್ವನಿ ಇಲ್ಲದ ವರ್ಗಕ್ಕೆ ಧ್ವನಿಸುವ ಶಕ್ತಿ ನೀಡುವಲ್ಲಿ ಯಶಸ್ವಿಯಾಗಲಿದೆ. ಲೋಕಸಭಾ ಚುನಾವಣೆಯಲ್ಲಿ ನಿರೀಕ್ಷಿತ ಗುರಿಸಾಧಿಸುವುದರೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ನಮ್ಮ ಸರಕಾರದಿಂದ ಮುಂದಿನ ದಿನಗಳಲ್ಲಿ ವರದಿಯ ಪೂರ್ಣ ಅನುಷ್ಠಾನ ನಡೆಯಲಿದೆ ಎಂದರು.

ಕಳೆದ ವಿಧಾನ ಸಭಾ ಕ್ಷೇತ್ರದ ಚುನಾವಣಾ ಅಭ್ಯರ್ಥಿ, ಕಾಂಗ್ರೆಸ್ ನಾಯಕ ಉದಯಕುಮಾರ್ ಶೆಟ್ಟಿ ಮಾತನಾಡಿ, ನಮ್ಮ ಸರಕಾರ ನೀಡಿರುವ ಐದು ಗ್ಯಾರಂಟಿಗಳು ಸಮಾಜದ ಬಡವರ್ಗಕ್ಕೆ ಆರ್ಥಿಕ ಶಕ್ತಿಯನ್ನು ನೀಡಿದೆ. ಆರ್ಥಿಕತೆ ನಿಂತ ನೀರಲ್ಲ. ಈ ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಹಣದ ಹರಿವು ದ್ವಿಗುಣಗೊಂಡಿದೆ. ಪಂಚ ಗ್ಯಾರಂಟಿಯಿಂದ ರಾಜ್ಯ ದಿವಾಳಿಯಾಗಲಿದೆ ಎಂದಿದ್ದ ಬಿಜೆಪಿ ಈಗ ಹತಾಶಗೊಂಡಿದೆ. ಗ್ಯಾರಂಟಿಯ ಶಾಶ್ವತ ಅನುಷ್ಠಾನಕ್ಕಾಗಿ ಲೋಕಸಭಾ ಚುನಾವಣೆಯ ಯಶಸ್ಸು ನಮ್ಮದಾಗ ಬೇಕು. ನಮ್ಮ ಅಭ್ಯರ್ಥಿ ಜಯಪ್ರಕಾಶ್ ಹಗ್ಡೆ ಇಲ್ಲಿಯೇ ಹುಟ್ಟಿ ಬೆಳದವರು. ಅವರ ಗೆಲುವು ಜನಸಾಮಾನ್ಯರ ಗೆಲುವು ಎಂದರು.

ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನಚಂದ್ರಪಾಲ್ ನಕ್ರೆ ಮಾತನಾಡಿ, ಭಾರತೀಯ ಸ್ಟೇಟ್ ಬ್ಯಾಂಕ್ ಸುಪ್ರಿಂ ಕೋರ್ಟಿನ ಮುಂದಿಟ್ಟಿರುವ ಚುನಾವಣಾ ಬಾಂಡುಗಳ ಒಳಸುಳಿ ಬಿಜೆಪಿಯ ಅಧಿಕಾರ ಸ್ಥಿರೀಕರಣ ದಾಹದ ಕರಾಳ ಮುಖವನ್ನು ಬಯಲು ಮಾಡಿದೆ. ಆ ಮೂಲಕ ಅದು ಒಂದು ಪ್ರಜಾಪ್ಭಭುತ್ವ ರಾಷ್ಟ್ರದಲ್ಲಿ ಅಧಿಕಾರ ನಡೆಸುವ ಮತ್ತು ಚುನಾವಣೆಗೆ ಸ್ಫರ್ದಿಸುವ ನೈತಿಕ ಹಕ್ಕನ್ನು ಕಳಕೊಂಡಿದೆ. ಕೇಂದ್ರದಲ್ಲಿ ಸ್ವಚ್ಛ ದಿಟ್ಟ ಜನಾಡಳಿತಕ್ಕಾಗಿ ಕಾಂಗ್ರೆಸ್ ಪಕ್ಷದ ಆಡಳಿತ ಅನಿವಾರ್ಯ ಎಂದರು.

ನಿವೃತ್ತ ಪುರಸಭಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ ಸಂದರ್ಭೋಚಿತವಾಗಿ ಮಾತಾಡಿದರು. ಮಾಜಿ ಪುರಸಭಾಧ್ಯಕ್ಷ ಸುಭೀತ್ ಕುಮಾರ್ ರವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗ, ರಹೀಮ್ ಪೊಲ್ಲಾರ್ ಹಿರಿಯ ನಾಯಕ ಗೋಪಾಲ ಭಂಡಾರಿ, ಪುರಸಭಾ ಸದಸ್ಯರು, ಮಾಜಿ ಸದಸ್ಯರು, ವಿವಿಧ ಘಟಕಗಳ ಅಧ್ಯಕ್ಷರು ಸದಸ್ಯರು ಉಪಸ್ಥಿತರಿದ್ದರು.

ಬ್ಲಾಕ್ ಕಾಂಗ್ರೆಸ್ ವಕ್ತಾರ ಫುರಸಭಾ ಸದಸ್ಯ ಶುಭದ ರಾವ್ ಸ್ವಾಗತಿಸಿ ಪ್ರಸ್ಥಾವನೆ ಮಾಡಿ ವಂದನೆ ಸಲ್ಲಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X