ಕಾರ್ಕಳ | ಕಾರು ಪಲ್ಟಿ: ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

ಕಾರ್ಕಳ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಪರಿಣಾಮ ಮೂವರು ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಜಾರಿಗೆ ಕಟ್ಟೆ ಚರ್ಚಿನ ಬಳಿ ರಾಜ್ಯ ಹೆದ್ದಾರಿಯಲ್ಲಿ ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಸಂಭವಿಸಿದೆ.
ಶಿವಮೊಗ್ಗದಿಂದ ಮಂಗಳೂರು ಕಡೆ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ತಡೆಗೋಡೆಗೆ ಅಪ್ಪಳಿಸಿ ಪಲ್ಟಿಯಾಗಿದೆ. ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದು ಗಾಯಗಳಾಗಿದ್ದು, ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಅಪಘಾತ ಗಮನಿಸಿದ ಕಟೀಲು ಕ್ಷೇತ್ರಕ್ಕೆ ಪಾದಯಾತ್ರೆ ಹೋಗುತ್ತಿದ್ದ ಯಾತ್ರೆಗಳು ಸಮಾಜ ಸೇವಕ ಸುಪ್ರೀತ್ ಶೆಟ್ಟಿಯವರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ತಕ್ಷಣ ಆಗಮಿಸಿದ ಅವರು ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.
Next Story