ಕರ್ನಾಟಕ ಬಂದ್: ಉಡುಪಿ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ
ಉಡುಪಿ, ಸೆ.29: ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಆಗ್ರಹಿಸಿ ಕರೆ ನೀಡಿರುವ ಕರ್ನಾಟಕ ಬಂದ್ಗೆ ಉಡುಪಿ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಜಿಲ್ಲೆಯ ಕುಂದಾಪುರ, ಕಾರ್ಕಳ, ಬೈಂದೂರು, ಉಡುಪಿ, ಕಾಪು, ಹೆಬ್ರಿ ಹಾಗೂ ಬ್ರಹ್ಮಾವರ ತಾಲೂಕುಗಳಲ್ಲಿ ಎಲ್ಲಾ ಅಂಗಡಿ ಮುಗ್ಗಟ್ಟುಗಳು ಎಂದಿನಂತೆ ತೆರೆದಿದ್ದವು. ಯಾವುದೇ ಪೇಟೆಯಲ್ಲೂ ಬಂದ್ ಕಂಡುಬಂದಿಲ್ಲ.
ಅದೇ ರೀತಿ ಖಾಸಗಿ, ಸಿಟಿ ಮತ್ತು ಸರಕಾರಿ ಬಸ್ಗಳು ಮತ್ತು ಆಟೋ, ಟ್ಯಾಕ್ಸಿಗಳು ಕೂಡ ಓಡಾಟ ನಡೆಸಿವೆ. ಜನ ಸಂಚಾರ ಕೂಡ ಸಾಮಾನ್ಯವಾಗಿತ್ತು. ಬಂದ್ ಹಿನ್ನೆಲೆಯಲ್ಲಿ ಜಿಲ್ಲೆಯ ಕೆಲವು ಶಾಲೆಗಳಿಗೆ ರಜೆ ಘೋಷಿಸಿರುವ ಬಗ್ಗೆ ವರದಿಯಾಗಿದೆ.
Next Story