Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕುಂದಾಪುರ: ರಾಷ್ಟ್ರೀಯ ಹೆದ್ದಾರಿಯಲ್ಲಿ...

ಕುಂದಾಪುರ: ರಾಷ್ಟ್ರೀಯ ಹೆದ್ದಾರಿಯಲ್ಲಿ ತೈಲ ಸೋರಿಕೆ ಪ್ರಕರಣ; ಸೋಪ್ ಆಯಿಲ್ ತುಂಬಿದ್ದ ಟ್ಯಾಂಕರ್ ವಶಕ್ಕೆ!

ಯೋಗೀಶ್ ಕುಂಭಾಸಿಯೋಗೀಶ್ ಕುಂಭಾಸಿ7 Sept 2024 2:04 PM IST
share
ಕುಂದಾಪುರ: ರಾಷ್ಟ್ರೀಯ ಹೆದ್ದಾರಿಯಲ್ಲಿ ತೈಲ ಸೋರಿಕೆ ಪ್ರಕರಣ; ಸೋಪ್ ಆಯಿಲ್ ತುಂಬಿದ್ದ ಟ್ಯಾಂಕರ್ ವಶಕ್ಕೆ!

ಕುಂದಾಪುರ: ಮಂಗಳೂರಿನಿಂದ ಉತ್ತರಪ್ರದೇಶದತ್ತ ಸೋಪ್ ಆಯಿಲ್ (ಸೋಪ್ ತಯಾರಿಕೆಯ ದ್ರವಾಂಶ) ತುಂಬಿದ್ದ ಬ್ರಹತ್ ಟ್ಯಾಂಕರ್ ಅಡಿಭಾಗದಲ್ಲಿ ಉಂಟಾದ ರಂಧ್ರದಿಂದ ಹೊರಚೆಲ್ಲಿದ ಸೋಪ್ ಆಯಿಲ್ ರಸ್ತೆಯಲ್ಲಿನ ಮಳೆ ನೀರಿನೊಂದಿಗೆ ಬೆರೆತು ಉಡುಪಿ ಜಿಲ್ಲೆಯ ತೆಕ್ಕಟ್ಟೆಯಿಂದ ಹೆಮ್ಮಾಡಿಯವರೆಗೂ ಹಲವರು ಬಿದ್ದು ಗಾಯಗೊಂಡ ಘಟನೆ ಶನಿವಾರ ಬೆಳಿಗ್ಗೆ ನಡೆದಿದ್ದು ಕುಂದಾಪುರ ಟ್ರಾಫಿಕ್ ಪೊಲೀಸರು ಮರವಂತೆ ಬಳಿ ಟ್ಯಾಂಕರ್ ವಶಕ್ಕೆ ಪಡೆದಿದ್ದಾರೆ.

ಚಾಲಕ ಧ್ಯಾನಚಂದ್ ಎನ್ನುವಾತನನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ಹಲವರಿಗೆ ಗಾಯ

ಮಂಗಳೂರಿನಿಂದ ಯುಪಿಗೆ ಬೆಳಿಗ್ಗೆ 32 ಟನ್ ಸೋಪ್ ಆಯಿಲ್ (ಪಾಮ್ ಪ್ಯಾಟಿ ಆಸಿಡ್ ಡಿಸ್ಟಿಲೇಟ್) ತುಂಬಿದ್ದ 16 ಟೈರ್‌ನ ಬೃಹತ್ ಗಾತ್ರದ ಟ್ಯಾಂಕರ್ ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಟ್ಯಾಂಕರ್ ಅಡಿಭಾಗದಲ್ಲಿ ಆಯಿಲ್ ಸೋರಿಕೆಯಾಗುತ್ತಿದ್ದು ಅದೇ ವೇಳೆ ಮಳೆಯಿದ್ದ‌ ಕಾರಣ ವಾಹನದ ಕನ್ನಡಿಯಲ್ಲಿ ಚಾಲಕನಿಗೆ ಇದು ಗಮನಕ್ಕೆ ಬಂದಿರಲಿಲ್ಲ. ಹೀಗಾಗಿ ತೆಕ್ಕಟ್ಟೆಯಿಂದ ಹೆಮ್ಮಾಡಿ ತನಕ ಟ್ಯಾಂಕರ್ ಸಾಗಿದ ದಾರಿಯಲ್ಲಿ ಮತ್ತೆ ಪ್ರಯಾಣಿಸಿದ ದ್ವಿಚಕ್ರ ವಾಹನ ಸವಾರರು ನಿಯಂತ್ರಣ ಕಳೆದುಕೊಂಡು ಬೀಳುವಂತಾಗಿದ್ದು ಲಘು ವಾಹನಗಳು ಬ್ರೇಕ್ ತಗುಲದೆ ಸಣ್ಣಪುಟ್ಟ ಅವಘಡ ಸಂಭವಿಸಿತ್ತು. ಪ್ರಾಥಮಿಕ ವರದಿ ಪ್ರಕಾರ 25-30 ಮಂದಿ ಬಿದ್ದಿದ್ದು 6 ಮಂದಿ ಗಾಯಗೊಂಡು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಿದ್ದ ಅಪಘಾತದಿಂದ ಹಲವು ವಾಹನಗಳಿಗೆ ಹಾನಿಯಾಗಿದೆ. ಗಂಗೊಳ್ಳಿ ಸಮೀಪ ತೆರಳುವಾಗ ಮಳೆ ನಿಂತಿದ್ದರಿಂದ ಚಾಲಕನಿಗೆ ಹಿಂದೆ ಆಯಿಲ್ ಸೋರಿಕೆ ಕಂಡುಬಂದಿದ್ದು ತ್ರಾಸಿ ಮರವಂತೆ ಬಳಿ ಟ್ಯಾಂಕರ್ ಬದಿಗಿಟ್ಟು ಸಂಬಂದಪಟ್ಟವರಿಗೆ ಮಾಹಿತಿ ನೀಡಿದ್ದಾನೆ. ಟ್ರಾಫಿಕ್ ಠಾಣೆ ಪಿಎಸ್ಐ ಪ್ರಸಾದ್ ಕುಮಾರ್ ಕೆ., ಸುದರ್ಶನ್ ಹಾಗೂ ಸಿಬ್ಬಂದಿಗಳು ಟ್ಯಾಂಕರ್ ವಶಕ್ಕೆ ಪಡೆದಿದ್ದಾರೆ‌.

ಪೊಲೀಸರ ಸಮಯ ಪ್ರಜ್ಞೆ:

ಘಟನೆ ಬಗ್ಗೆ ಮಾಹಿತಿಯರಿತು ಕಾರ್ಯಪ್ರವೃತ್ತರಾ ಪೊಲೀಸರು ಪ್ರಕರಣ ವರದಿಯಾದ ತೆಕ್ಕಟ್ಟೆಯಿಂದ ಹೆಮ್ಮಾಡಿಯವರೆಗೆ ಆಯಕಟ್ಟಿನ ಸ್ಥಳಗಳಲ್ಲಿ ಬ್ಯಾರಿಕೇಡ್ ಅಳವಡಿಸಿ ಏಕಮುಖ ಸಂಚಾರ ವ್ಯವಸ್ಥೆ ಮಾಡಿದರು. ಪೊಲೀಸರಿಗೆ ಹಲವೆಡೆ ಸಾರ್ವಜನಿಕರು ಸಹಕಾರ ನೀಡಿದರು. ಶನಿವಾರ ಮಧ್ಯಾಹ್ನ 12 ಗಂಟೆಯವರೆಗೆ 15 ಕಿಮೀ ವ್ಯಾಪ್ತಿಯಲ್ಲಿ ಒನ್ ವೇ ಮಾಡಲಾಗಿದ್ದು ಸಂಭಾವ್ಯ ಅಪಘಾತ ತಪ್ಪಿಸಲು ಮುಂಜಾಗೃತಾ ಕ್ರಮ ವಹಿಸಲಾಗಿತ್ತು. ಪೊಲೀಸರ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ.

ಸಂಚಾರಕ್ಕೆ ಅನುವು

ದ್ವಿಚಕ್ರ ವಾಹನ ಸವಾರರು ಹಾಗೂ ಲಘು ವಾಹನಕ್ಕೆ ಸಮಸ್ಯೆಯಾಗುತ್ತಿದ್ದಂತೆ ಅಗ್ನಿಶಾಮಕ ದಳದವರು, ರಾಷ್ಟ್ರೀಯ ಹೆದ್ದಾರಿ ಗುತ್ತಿಗೆ ಕಂಪೆನಿಗಳು ಸ್ಥಳಕ್ಕೆ ದೌಡಾಯಿಸಿ ನೀರನ್ನು ಹರಿಸಿ ಸೋರಿಕೆಯಾದ ಸೋಪ್ ಆಯಿಲ್‌ನಿಂದ ವಾಹನ ಸಂಚಾರಕ್ಕೆ ಸಮಸ್ಯೆಯಾಗದಂತೆ ಮಾಡಲು ಹರಸಾಹಸಪಟ್ಟರು.

share
ಯೋಗೀಶ್ ಕುಂಭಾಸಿ
ಯೋಗೀಶ್ ಕುಂಭಾಸಿ
Next Story
X