Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕೊಲ್ಲೂರು ದೇವಳದ ಕುರಿತ ಸುಳ್ಳು ಸುದ್ದಿ...

ಕೊಲ್ಲೂರು ದೇವಳದ ಕುರಿತ ಸುಳ್ಳು ಸುದ್ದಿ ವಿರುದ್ಧ ಕಾನೂನು ಕ್ರಮ: ವ್ಯವಸ್ಥಾಪನ ಸಮಿತಿ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ10 Oct 2024 8:06 PM IST
share
ಕೊಲ್ಲೂರು ದೇವಳದ ಕುರಿತ ಸುಳ್ಳು ಸುದ್ದಿ ವಿರುದ್ಧ ಕಾನೂನು ಕ್ರಮ: ವ್ಯವಸ್ಥಾಪನ ಸಮಿತಿ ಎಚ್ಚರಿಕೆ

ಉಡುಪಿ, ಅ.10: ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದ ಆದಾಯವನ್ನು ಅನಗತ್ಯವಾಗಿ ಸರಕಾರದ ಇತರ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂಬುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮಾಹಿತಿ ಹಾಗೂ ವಿಚಾರ ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿದೆ ಎಂದು ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಬಾಬು ಶೆಟ್ಟಿ ತಗ್ಗರ್ಸೆ ಹಾಗೂ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಶೆಟ್ಟಿ ಜಂಟಿ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಭಕ್ತಾಧಿಗಳು ಈ ಸುಳ್ಳು ಸುದ್ದಿಯನ್ನು ನಂಬಬಾರದು. ದೇವಸ್ಥಾನಕ್ಕೆ ಬರುವ ಭಕ್ತರ ಹಣವನ್ನು ಸದುದ್ದೇಶಗಳಿಗೆ ಮಾತ್ರ ಬಳಕೆ ಮಾಡಲಾಗುತ್ತಿದೆ. ಕಾನೂನು ತಜ್ಞರಿಂದ ಸಲಹೆಯನ್ನು ಪಡೆದುಕೊಂಡು ಈ ರೀತಿ ಕಪೋಲಕಲ್ಪಿತ ಸುದ್ದಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು, ಭಕ್ತರನ್ನು ಗೊಂದಲಕ್ಕೆ ಸಿಲುಕಿಸುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆಯೂ ಚಿಂತನೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ದೇವಸ್ಥಾನಕ್ಕೆ ಬರುವ ಭಕ್ತರು ನೀಡುವ ಸೇವೆ, ಕಾಣಿಕೆ ಹಾಗೂ ಇತರ ಮೂಲಗಳಿಂದ ಸಂಗ್ರಹವಾಗುವ ಒಟ್ಟು ಮೊತ್ತ ವನ್ನು ಈ ಮೇಲೆ ವಿವರಿಸಿರುವ ದೇವಳದ ದೈನಂದಿನ ಹಾಗೂ ವಿಶೇಷ ಕಾರ್ಯಕ್ರಮಗಳಿಗಾಗಿ ಖರ್ಚು ಮಾಡಿ, ಉಳಿಕೆ ಯಾದ ಹಣವನ್ನು ದೇವಳದ ಹೆಸರಿನಲ್ಲಿ ಬ್ಯಾಂಕ್‌ಗಳಲ್ಲಿ ನಿರಖು ಠೇವಣೆಯನ್ನು ಇರಿಸಲಾಗುವುದು. ಸರಕಾರದ ಒಪ್ಪಿಗೆ ಯನ್ನು ನಿಯಮಾನುಸಾರ ಪಡೆದುಕೊಂಡು ದೇವಸ್ಥಾನದ ಅಭಿವೃದ್ಧಿ ಕಾರ್ಯಗಳು ಹಾಗೂ ಇತರ ಅಗತ್ಯ ವೆಚ್ಚಗಳಿಗೆ ಮಾತ್ರ ದೇವಸ್ಥಾನದ ಆದಾಯವನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ.

ಹೀಗೆ 2021-22ರಲ್ಲಿ 1,11,12,623ರೂ., 2022-23ರಲ್ಲಿ 18,44,56,572 ರೂ., 2023-24ರಲ್ಲಿ 16,78,58,523ರೂ., 2024-25ರಲ್ಲಿ 14,97,93,022ರೂ. ಹಣವನ್ನು ದೇವಳದ ಹೆಸರಿನಲ್ಲಿ ಬ್ಯಾಂಕ್‌ಗಳಲ್ಲಿ ಠೇವಣಿಯಾಗಿ ಇರಿಸಲಾಗಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರಸ್ತುತ ದೇವಳದ ಹೆಸರಿನಲ್ಲಿ 190,36,78,725ರೂ. ಮೊತ್ತದ ನಿರಖು ಠೇವಣೆ ಇದೆ. ಸರಕಾರದಿಂದ ಕಳೆದ ಮೂರು ವರ್ಷಗಳಲ್ಲಿ ತಸ್ತೀಕ್ ಮತ್ತು ವರ್ಷಾಸನ ದೇವಳದ ಬ್ಯಾಂಕ್ ಖಾತೆಗೆ ಜಮೆಯಾಗಿರುವ ಮೊತ್ತದ ವಿವರ ಈ ರೀತಿ ಇದೆ. 2021-22ರಲ್ಲಿ ತಸ್ತೀಕ್- 36,000ರೂ, ವರ್ಷಾಸನ- 1,43,023ರೂ. 2022-23ರಲ್ಲಿ ತಸ್ತೀಕ್-12,000ರೂ., ವರ್ಷಾಸನ- 1,23,100.ರೂ. ಮತ್ತು 2023-24ರಲ್ಲಿ ತಸ್ತೀಕ್- 61,600ರೂ., ವರ್ಷಾಸನ- 61,600ರೂ. ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X