ಮಣಿಪಾಲ ಆರೋಗ್ಯ ಕಾರ್ಡ್ 2023: ನೋಂದಾವಣಿ ಪ್ರಕ್ರಿಯೆಗೆ ಚಾಲನೆ
ಕಾರ್ಕಳ: ಡಾ. ಟಿ.ಎಂ.ಎ. ಪೈ. ಮಣಿಪಾಲ್ ಆರೋಗ್ಯ ಕಾರ್ಡ್ 2023ರ ನೋಂದಣಿ ಪ್ರಾರಂಭವಾಗಿದೆ. ಮಣಿಪಾಲ್ ಆರೋಗ್ಯಕಾರ್ಡ್ (MAC) ಅನ್ನು ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಚಿಕಿತ್ಸೆಯನ್ನು ಕೈಗೆಟುಕುವಂತೆ ಮಾಡುವ ಉದ್ದೇಶದಿಂದ ಪ್ರಾರಂಭಿಸಲಾಗಿದೆ ಎಂದು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಮಾರುಕಟ್ಟೆ ವಿಭಾಗದ ವ್ಯವಸ್ಥಾಪಕರಾದ ಮೋಹನ್ ಶೆಟ್ಟಿ ತಿಳಿಸಿದರು
ಅವರು ಕಾರ್ಕಳ ಹೋಟೆಲ್ ಕಟೀಲು ಇಂಟರ್ನ್ಯಾಷನಲ್ ನಲ್ಲಿ ಕಾರ್ಕಳ ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಮೊಹಮ್ಮದ್ ಶರೀಫ್ ರವರಿಗೆ ಮಣಿಪಾಲ್ ಆರೋಗ್ಯ ಕಾರ್ಡನ್ನು ನೀಡುವುದರ ಮೂಲಕ ಮಣಿಪಾಲ ಆರೋಗ್ಯಕಾರ್ಡ್ 2023ರ ನೋಂದಾವಣಿ ಪ್ರಕ್ರಿಯೆ ಗೆ ಚಾಲನೆ ನೀಡಿದರು.
ಇದು ಆಸ್ಪತ್ರೆಯ ಎಲ್ಲಾ ಆರೋಗ್ಯ ಸೇವೆಗಳ ಮೇಲೆ ರಿಯಾಯಿತಿ ನೀಡುತ್ತದೆ. ಸಣ್ಣ ಮೊತ್ತವನ್ನು ಪಾವತಿಸುವ ಮೂಲಕ, ಯಾರಾದರೂ ಸದಸ್ಯರಾಗಬಹುದು ಮತ್ತು ಪ್ರಯೋಜನಗಳನ್ನು ಪಡೆಯಬಹುದು. ಕಾರ್ಡ್ ಖರೀದಿಸಲು ಹೂಡಿಕೆ ಮಾಡಿದ ಹಣವನ್ನು ಕೇವಲ ಎರಡು ಅಥವಾ ಮೂರು ಕಾರ್ಡ್ ಬಳಕೆಗಳಲ್ಲಿ ರಿಯಾಯಿತಿಯ ರೂಪದಲ್ಲಿ ಹಿಂಪಡೆಯ ಬಹುದು. "ಸಂಪೂರ್ಣ ಕುಟುಂಬಕ್ಕಾಗಿ ಶ್ರೇಷ್ಠ ಮೌಲ್ಯ ಮತ್ತು ವಿಶ್ವಾಸಾರ್ಹ ಸೇವೆ" ಎಂಬುದು ಮಣಿಪಾಲ್ ಆರೋಗ್ಯಕಾರ್ಡ್ ನ ದ್ಯೇಯ ವಾಕ್ಯ. ಮಾಹೆ ಮಣಿಪಾಲದ ಸಾಮಾಜಿಕ ಜವಾಬ್ದಾರಿಯ ಭಾಗವಾಗಿ ಮಣಿಪಾಲ ಆರೋಗ್ಯ ಕಾರ್ಡ್ ಅನ್ನು 2000 ರಲ್ಲಿ ಪ್ರಾರಂಭಿಸಲಾಯಿತು. ಆರೋಗ್ಯ ಸೇವೆಯನ್ನು ಉಚಿತವಾಗಿ ನೀಡಲು ಸಾಧ್ಯ ವಾಗದಿದ್ದರೂ ಎಲ್ಲರಿಗೂ ರಿಯಾಯಿತಿ ದರದಲ್ಲಿ ಲಭ್ಯವಾಗಬೇಕು ಎಂಬುದು ಇದರ ಉದ್ದೇಶವಾಗಿತ್ತು. ಸದಸ್ಯತ್ವ ಶುಲ್ಕವಾಗಿ ಒಂದು ಸಣ್ಣ ಮೊತ್ತವನ್ನು ಪಾವತಿಸುವ ಮೂಲಕ ಯಾರಾದರೂ ಸದಸ್ಯತ್ವವನ್ನು ಪಡೆಯಬಹುದು ಮತ್ತು ಅವರು ಕಾರ್ಡಿನ ಕೇವಲ ಎರಡು ಅಥವಾ ಮೂರು ಬಳಕೆಗಳಲ್ಲಿ ರಿಯಾಯಿತಿಗಳ ರೂಪದಲ್ಲಿ ಅವರ ಹೂಡಿಕೆಯನ್ನು ಮರಳಿ ಪಡೆಯಬಹುದಾಗಿದೆ. ಹೆಚ್ಚಿನ ವಿವರಗಳನ್ನು www.manipalhealthcard.com ಗೆ ಲಾಗ್ ಇನ್ ಆಗುವುದರ ಮೂಲಕ ತಿಳಿದುಕೊಳ್ಳ ಬಹುದು.
ಈ ಸಂದರ್ಭದಲ್ಲಿ ಡಾ.ಟಿ.ಎಂ.ಎ.ಪೈ ರೋಟರಿ ಆಸ್ಪತ್ರೆ, ಕಾರ್ಕಳದ ಮುಖ್ಯ ವೈದ್ಯಾಧಿಕಾರಿಗಳಾದ ಡಾ.ಕೀರ್ತಿನಾಥ ಬಳ್ಳಾಲ, ಕಾರ್ಕಳ ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘದ ಕೋಶಾಧಿಕಾರಿ ಕೆ ಎಂ ಖಲೀಲ್ ಕಾರ್ಕಳದ ನಟೇಶ್ ಪ್ರತಿನಿಧಿಯಾದ ಚೇತನ್ ಉಪಸ್ಥಿತರಿದ್ದರು.