ನಿಟ್ಟೆ ಘನತ್ಯಾಜ್ಯ ನಿರ್ವಹಣಾ ಕೇಂದ್ರಕ್ಕೆ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ
ಕಾರ್ಕಳ: ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿರುವ ಸಮಗ್ರ ಘನತ್ಯಾಜ್ಯ ನಿರ್ವಹಣೆ ಕೇಂದ್ರಕ್ಕೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಇಂದು ಭೇಟಿ ನೀಡಿದರು.
ಈ ವೇಳೆ ತ್ಯಾಜ್ಯ ವಿಂಗಡಣೆ ಹಾಗೂ ತ್ಯಾಜ್ಯಗಳ ನಿರ್ವಹಣೆ ಕುರಿತು ಅಧಿಕಾರಿಗಳಿಂದ ಮಾಹಿತಿಗಳನ್ನು ಪಡೆದುಕೊಂಡರು.
ಈ ಸಂದರ್ಭದಲ್ಲಿ ಸ್ಥಳೀಯ ಶಾಸಕ ಸುನೀಲ್ ಕುಮಾರ್, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಸಿಇಒ ಪ್ರಸನ್ನ ಎಚ್., ಉಪವಿಭಾಗಾಧಿಕಾರಿ ರಶ್ಮಿ, ಕಾಂಗ್ರೆಸ್ ನಾಯಕ ಉದಯಕುಮಾರ್ ಶೆಟ್ಟಿ ಮುನಿಯಾಲು ಉಪಸ್ಥಿತರಿದ್ದರು.
Next Story