ಉಡುಪಿಯಲ್ಲಿ ತಾಯಿ, ಮಕ್ಕಳ ಕಗ್ಗೊಲೆ ಪ್ರಕರಣ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ
ಉಡುಪಿ: ನೇಜಾರು ನಾಲ್ವರ ಕಗ್ಗೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಪ್ರವೀಣ್ ಚೌಗುಲೆಯ ಸ್ಥಳ ತನಿಖೆ ಸಂದರ್ಭ ಅಕ್ರಮ ಕೂಟ ಸೇರಿಕೊಂಡು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ನ.16ರಂದು ಪ್ರಕರಣದ ಆರೋಪಿ ಪ್ರವೀಣ್ ಅರುಣ್ ಚೌಗುಲೆಯನ್ನು ಕೃತ್ಯ ನಡೆದ ಸ್ಥಳದಲ್ಲಿ ತನಿಖೆಗಾಗಿ ಕರೆದುಕೊಂಡು ಬಂದಿದ್ದು, ತನಿಖೆ ಪ್ರಕ್ರಿಯೆ ಮುಗಿಸಿ ವಾಪಸ್ಸು ಆರೋಪಿಯನ್ನು ಇಲಾಖಾ ವಾಹನದಲ್ಲಿ ಕರೆದುಕೊಂಡು ಹೋಗುವಾಗ ಸುಮಾರು 30 ರಿಂದ 40 ಮಂದಿ ಅಕ್ರಮ ಕೂಟ ಸೇರಿಕೊಂಡು ಇಲಾಖಾ ವಾಹನವನ್ನು ಅಡ್ಡ ಹಾಕಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿರುವು ದಾಗಿ ಮಲ್ಪೆ ಪೊಲೀಸ್ ಠಾಣೆಯಲ್ಲಿ ಕಲಂ: 143, 147, 341, 186 ಜೊತೆಗೆ 149 ಐಪಿಸಿಯಂತೆ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿತ್ತು.
ಇದನ್ನು ಪ್ರಶ್ನಿಸಿ ಎಪಿಸಿಆರ್‌ನ ಪ್ರಧಾನ ಕಾರ್ಯದರ್ಶಿ ನ್ಯಾಯವಾದಿ ಮುಹಮ್ಮದ್ ನಿಯಾಝ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಈ ಪ್ರಕರಣಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶಿಸಿದೆ.