ಉಡುಪಿಯಲ್ಲಿ ತಾಯಿ, ಮಕ್ಕಳ ಕಗ್ಗೊಲೆ ಪ್ರಕರಣ; ಹಣಕಾಸು ವ್ಯವಹಾರ ಸಹಿತ ಎಲ್ಲ ಆಯಾಮಗಳಲ್ಲೂ ತನಿಖೆ: ಎಸ್ಪಿ ಡಾ.ಅರುಣ್
ಎಸ್ಪಿ ಡಾ.ಅರುಣ್
ಉಡುಪಿ: ನೇಜಾರಿನ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ರಚನೆ ಮಾಡಿರುವ ಐದು ಪೊಲೀಸ್ ತಂಡಗಳು ಹಣಕಾಸಿನ ವ್ಯವಹಾರ ಸೇರಿದಂತೆ ಎಲ್ಲ ಆಯಾಮಗಳಿಂದಲೂ ತನಿಖೆ ನಡೆಸುತ್ತಿವೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ತಿಳಿಸಿದ್ದಾರೆ.
ಈ ಪೊಲೀಸ್ ತಂಡಗಳು ಸಂಬಂಧಿಕರು, ಸ್ನೇಹಿತರು, ಪರಿಚಿತರು ಸೇರಿದಂತೆ ಹಲವು ಮಂದಿಯನ್ನು ವಿಚಾರಣೆಗೆ ಒಳಪಡಿಸಿ ಮಾಹಿತಿಯನ್ನು ಪಡೆದುಕೊಳ್ಳುತ್ತಿವೆ. ಅದೇ ರೀತಿ ತಾಂತ್ರಿಕ ತಂಡಗಳು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಗಾಗಿ ಶೋಧ ಕಾರ್ಯ ನಡೆಸುತ್ತಿದೆ ಎಂದು ಅವರು ಹೇಳಿದರು.
Next Story