ಸೆ.2-3ರಂದು ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಲೀಗ್
ಉಡುಪಿ, ಆ.29: ಬುಡೋಕಾನ್ ಸ್ಪೋರ್ಟ್ಸ್ ಕರಾಟೆ- ಡೋ ಅಸೋಸಿ ಯೇಶನ್ ಆಫ್ ಇಂಡಿಯಾ ಉಡುಪಿ ಜಿಲ್ಲೆ ಇದರ ರಾಷ್ಟ್ರೀಯ ಮಟ್ಟದ ಆಹ್ವಾನಿತರ ಮುಕ್ತ ಚಾಂಪಿಯನ್ ಲೀಗ್ ‘ಬ್ಲಾಸ್ಟ್ 2023’ ಸೀಝನ್-2ನ್ನು ಸೆ.2 ಮತ್ತು 3ರಂದು ಮಣಿಪಾಲದ ಆರ್‌ಎಸ್‌ಬಿ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘಟನಾ ಸಮಿತಿ ಅಧ್ಯಕ್ಷ ರಘುರಾಜ್ ಪಣಿಯಾಡಿ, ಚಾಂಪಿಯನ್‌ಲೀಗ್‌ನಲ್ಲಿ ಗೋವಾ, ಕೇರಳ, ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳ ಒಟ್ಟು 1500ಕ್ಕೂ ಅಧಿಕ ಸ್ಪರ್ಧಿಗಳು ಭಾಗವಹಿಸಲಿರುವರು. ಒಟ್ಟು 60 ಕೆಟಗರಿಯಲ್ಲಿ ಸ್ಪರ್ಧೆಗಳು ನಡೆಯಲಿವೆ. ಗ್ರಾಂಟ್ ಚಾಂಪಿಯನ್‌ನಲ್ಲಿ ವಿಜೇತರಿಗೆ ನಗದು ಬಹುಮಾನ ನೀಡಲಾಗುವುದು ಎಂದರು.
ಸೆ.2ರಂದು ಬೆಳಗ್ಗೆ 11ಗಂಟೆಗೆ ಶಾಸಕ ಯಶ್‌ಪಾಲ್ ಸುವರ್ಣ ಉದ್ಘಾಟಿಸ ಲಿರುವರು. ಅಧ್ಯಕ್ಷತೆಯನ್ನು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ವಹಿಸಲಿ ರುವರು. ಸೆ.3ರಂದು ಸಂಜೆ 4.30ಕ್ಕೆ ನಡೆಯಲಿರುವ ಸಮಾರೋಪ ಸಮಾ ರಂಭದ ಅಧ್ಯಕ್ಷತೆಯನ್ನು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ವಹಿಸಲಿರುವರು ಎಂದು ಅವರು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಸ್ವಾಗತ ಸಮಿತಿಯ ಗೌರವಾಧ್ಯಕ್ಷ ಲೀಲಾಧರ್ ಶೆಟ್ಟಿ, ಅಧ್ಯಕ್ಷ ಪ್ರಸನ್ನ ಶೆಟ್ಟಿ ಬೈಲೂರು, ಉಪಾಧ್ಯಕ್ಷ ಸಂದೀಪ್ ಶೆಟ್ಟಿ ಮಾಣಿಬೆಟ್ಟು, ಉಪಾಧ್ಯಕ್ಷ ಶರತ್ ಉಚ್ಚಿಲ, ಸಂಘಟನಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುಚೇತ್ ಸಾಲಿಯಾನ್ ಉಪಸ್ಥಿತರಿದ್ದರು.