ವಿಶ್ವ ಬಂಟರ ಕ್ರೀಡಾಕೂಟ, ಸಾಂಸ್ಕೃತಿಕ ವೈಭವಕ್ಕೆ ಪೂರ್ವಭಾವಿ ಸಭೆ
ಉಡುಪಿ, ಸೆ.28: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಉಡುಪಿಯಲ್ಲಿ ನಡೆಯಲಿರುವ ವಿಶ್ವ ಬಂಟರ ಕ್ರೀಡಾಕೂಟ ಹಾಗೂ ವಿಶ್ವ ಬಂಟರ ಸಾಂಸ್ಕೃತಿಕ ವೈಭವದ ಸಿದ್ಧತೆಗೆ ಪೂರ್ವಭಾವಿ ಸಭೆ ಉಡುಪಿಯ ಓಶಿಯನ್ ಪರ್ಲ್ ಹೊಟೇಲ್ ಸಭಾಂಗಣದಲ್ಲಿ ಬುಧವಾರ ಸಂಜೆ ನಡೆಯಿತು.
ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರ ಸಾರಥ್ಯದಲ್ಲಿ ವಿಶ್ವ ಬಂಟರ ಕ್ರೀಡಾಕೂಟ ಅಕ್ಟೋಬರ್ 28ರಂದು ಉಡುಪಿ ಅಜ್ಜರಕಾಡು ಮೈದಾನದ ‘ಶ್ರೀಮತಿ ನಳಿನ ಭೋಜ ಶೆಟ್ಟಿ ವೇದಿಕೆ’ಯಲ್ಲಿ ಹಾಗೂ ವಿಶ್ವ ಬಂಟರ ಸಾಂಸ್ಕೃತಿಕ ವೈಭವ ಅ.29ರಂದು ‘ಶ್ರೀಕನ್ಯಾನ ಸದಾಶಿವ ಶೆಟ್ಟಿ ವೇದಿಕೆ’ಯಲ್ಲಿ ನಡೆಯಲಿವೆ.
ಸಭೆಯಲ್ಲಿ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ್ ಶೆಟ್ಟಿ, ಗೌರವ ಕಾರ್ಯದರ್ಶಿಜಯಕರಶೆಟ್ಟಿ ಇಂದ್ರಾಳಿ, ಜೊತೆ ಕಾರ್ಯದರ್ಶಿ ಹಾಗೂ ಸಾಂಸ್ಕೃತಿಕ ಸಮಿತಿಯ ಸಂಚಾಲಕ ಚಂದ್ರಹಾಸ್ ಡಿ.ಶೆಟ್ಟಿ, ಕ್ರೀಡಾ ಸಮಿತಿಯ ಸಹಸಂಚಾಲಕ ರೋಷನ್ ಕುಮಾರ್ ಶೆಟ್ಟಿ ಹಾಗೂ ಇತರ ಸಮಿತಿಗಳ ಎಲ್ಲಾ ಸಂಚಾಲಕರು ಮತ್ತು ಸಹ ಸಂಚಾಲಕರು ಉಪಸ್ಥಿತರಿದ್ದರು.
ಸಭೆಯಲ್ಲಿ ವಿಶ್ವ ಬಂಟರ ಸಮ್ಮೇಳನದ ಪ್ರಯುಕ್ತ ನಡೆಯಲಿರುವ ಕಾರ್ಯಕ್ರಮಗಳ ತಯಾರಿಯ ಕುರಿತು ಚರ್ಚಿಸಲಾ ಯಿತು. ಸಮಿತಿಗಳ ಸಂಚಾಲಕರು ಹಾಗೂ ಸಹಸಂಚಾಲಕರು ಕಾರ್ಯಕ್ರಮಗಳನ್ನು ನಡೆಸುವ ಬಗ್ಗೆ ಅವರವರ ಅಭಿಪ್ರಾಯ ವಿನಿಮಯ ಮಾಡಿಕೊಂಡರು. ಸಭೆಯ ಕೊನೆಗೆ ವಿಶ್ವ ಬಂಟರ ಸಮ್ಮೇಳನ ನಡೆಯುವ ಅಜ್ಜರಕಾಡು ಮೈದಾನದ ಸ್ಥಳ ವೀಕ್ಷಣೆ ಮಾಡಿ ಸೂಚನೆಗಳನ್ನು ನೀಡಲಾಯಿತು.