ವಿಧಾನ ಪರಿಷತ್ ಚುನಾವಣೆ: ಕಾಪು ಮತಗಟ್ಟೆ ಬಳಿ ಮಾತಿನ ಚಕಮಕಿ
ಕಾಪು, ಜೂ.3: ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಸಂಬಂಧ ಕಾಪು ಮತಗಟ್ಟೆ ಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದಿರುವ ಬಗ್ಗೆ ವರದಿ ಯಾಗಿದೆ.
ಕಾರ್ಯಕರ್ತರು ಮತಗಟ್ಟೆ ಬಳಿಯೇ ತಮ್ಮ ಅಭ್ಯರ್ಥಿಗೆ ಮತ ಹಾಕುವಂತೆ ಮತದಾರರಿಗೆ ಒತ್ತಾಯ ಹೇರುತ್ತಿದ್ದರೆನ್ನಲಾ ಗಿದೆ. ಈ ಮೂಲಕ ಮತದಾರರ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದ ಕಾರ್ಯಕರ್ತರು, ಪರಸ್ಪರ ದೋಷಾರೋಪ ಮಾಡಿಕೊಂಡಿದ್ದರು. ಇದರಿಂದ ಎರಡು ಪಕ್ಷಗಳ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಇದರಿಂದ ಕೆಲ ಕಾಲ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಮಾಹಿತಿ ತಿಳಿದು ಮಧ್ಯಪ್ರವೇಶಿಸಿದ ಕಾಪು ಪೊಲೀಸರು, ಎರಡು ಪಕ್ಷದ ಕಾರ್ಯಕರ್ತರನ್ನು ಸ್ಥಳದಿಂದ ದೂರ ಕಳುಹಿಸಿ ಪರಿಸ್ಥಿತಿ ತಿಳಿಗೊಳಿಸಿದರು.
Next Story