ಸಂಕಷ್ಟದಲ್ಲಿರುವ ಕಲಾವಿದರಿಗೆ ಮಾಸಾಶನ ಯೋಜನೆ: ಅರ್ಜಿ ಆಹ್ವಾನ
ಉಡುಪಿ, ಜು.6: ರಾಜ್ಯ ಸರಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೂಲಕ ನಾಡು -ನುಡಿಯ ಸೇವೆಗೆ ಸಂಬಂಧಿಸಿದಂತೆ ಕಲೆ, ಸಂಸ್ಕೃತಿ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿ, ಆರ್ಥಿಕವಾಗಿ ಸಂಕಷ್ಟ ದಲ್ಲಿರುವ ಕಲಾವಿದರಿಗೆ ಪ್ರತಿ ತಿಂಗಳು 2,000 ರೂ.ಗಳ ಮಾಶಾಸನವನ್ನು ನೀಡುವ ಯೋಜನೆಯನ್ನು ಈ ಹಿಂದೆ ಜಾರಿಗೆ ತಂದಿದ್ದು, ಆಸಕ್ತ ಅರ್ಹ ಕಲಾವಿದರು ಹಾಗೂ ಸಾಹಿತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಗೆ ವರ್ಷಪೂರ್ತಿ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಕನಿಷ್ಠ 58 ವರ್ಷ ಪೂರ್ಣಗೊಂಡಿರುವ, 25 ವರ್ಷಗಳ ಕಾಲ ಕಲೆ, ಸಂಸ್ಕೃತಿ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಹಾಗೂ ವಾರ್ಷಿಕ ಆದಾಯ ಒಂದು ಲಕ್ಷ ರೂ. ಮಿತಿಯಲ್ಲಿರುವ ಅರ್ಹರು ಅರ್ಜಿ ಸಲ್ಲಿಸ ಬಹುದು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಉಡುಪಿ ದೂರವಾಣಿ ಸಂಖ್ಯೆ: 0820-2986168 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Next Story