ಮಕ್ಕಳ ಹಕ್ಕುಗಳ ರಕ್ಷಣೆ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿ: ಡಾ.ತಿಪ್ಪೇಸ್ವಾಮಿ ಕೆ.ಟಿ
ರಾಜ್ಯ ಮಕ್ಕಳ ಹಕ್ಕು ರಕ್ಷಣಾ ಆಯೋಗದ ಸಭೆ
ಉಡುಪಿ: ಮಕ್ಕಳ ಹಕ್ಕುಗಳ ರಕ್ಷಣೆಗೆ ಇರುವ ಕಾಯಿದೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಇಲಾಖೆ ಗಳು ಸಮನ್ವಯತೆ ಯಿಂದ ಕಾರ್ಯನಿರ್ವಹಿಸುವ ಜೊತೆಗೆ ಮಕ್ಕಳ ಜೀವನ ಮಟ್ಟವನ್ನು ಉತ್ತಮ ಗೊಳಿಸಲು ಅಧಿಕಾರಿ ಗಳು ಕ್ರಿಯಾಶೀಲರಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕು ರಕ್ಷಣಾ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ ಕೆ.ಟಿ. ತಿಳಿಸಿದ್ದಾರೆ.
ಮಣಿಪಾಲದ ರಜತಾದ್ರಿಯಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾ ಮಟ್ಟದ ಮಕ್ಕಳ ರಕ್ಷಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಸಮಾಜದಲ್ಲಿ ದುರ್ಬಲರಾದ ಮಕ್ಕಳ ರಕ್ಷಣೆಗೆ ಸರಕಾರ ಅನೇಕ ಕಾಯ್ದೆ, ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಇವುಗಳ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸುವುದರ ಜೊತೆಗೆ ಅವುಗಳು ಸಮರ್ಪಕವಾಗಿ ಅನುಷ್ಠಾನ ಗೊಂಡು ಮಕ್ಕಳ ಸರ್ವಾಂಗೀಣ ಅಭಿವೃದ್ಧಿಯಾಗುವಂತೆ ನೋಡಿ ಕೊಳ್ಳಬೇಕು ಎಂದವರು ಸಲಹೆ ನೀಡಿದರು.
ಜಿಲ್ಲಾ ವ್ಯಾಪ್ತಿಯ ಅಂಗನವಾಡಿ, ಶಾಲೆ ಹಾಗೂ ವಸತಿ ನಿಲಯಗಳ ಆವರಣದಲ್ಲಿ ವಿದ್ಯುತ್ ಅವಘಡ ಸಂಭವಿಸುವ ಟ್ರಾನ್ಸ್ಫಾರ್ಮ್, ವಿದ್ಯುತ್ ತಂತಿಗಳು ಹಾದು ಹೋಗಿದ್ದಲ್ಲಿ ಅವುಗಳನ್ನು ಕೂಡಲೇ ಬದಲಾಯಿಸಬೇಕು ಎಂದರು.
ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಖಾಸಗಿ ಹಾಗೂ ಸರಕಾರಿ ಶಾಲೆಗಳಲ್ಲಿರುವ ವಾಹನ ಚಾಲಕರ ವರದಿಯನ್ನು ನೀಡುವಂತೆ ಸೂಚಿಸಿದ ಅವರು, ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ, ಶೈಕ್ಷಣಿಕ ಸಂಸ್ಥೆಗಳಲ್ಲಿ ಹಾಗೂ ವಸತಿ ನಿಲಯಗಳಲ್ಲಿ ಮಕ್ಕಳ ರಕ್ಷಣಾ ನೀತಿಯನ್ನು ಪರಿಣಾಮಕಾರಿ ಪ್ರತಿಶತಃ ನೂರರಷ್ಟು ಕಡ್ಡಾಯವಾಗಿ ಅನುಷ್ಠಾನಗೊಳಿಸಬೇಕು ಎಂದರು.
ಇನ್ನೂ ವಯಸ್ಕರಾಗದ ಅನೇಕ ಹೆಣ್ಣು ಮಕ್ಕಳು ಗರ್ಭಿಣೀಯರಾಗುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ. ಆರೋಗ್ಯ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಜಂಟಿಯಾಗಿ ಈ ಸಮಸ್ಯೆಯನ್ನು ತೊಲಗಿಸಲು ಪ್ರಯತ್ನಿಸಬೇಕು. ಪ್ರಕರಣ ಗಮನಕ್ಕೆ ಬಂದ ತಕ್ಷಣ ಫೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂದು ಡಾ.ತಿಪ್ಪೇಸ್ವಾಮಿ ಸೂಚಿಸಿದರು.
ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ಗಳಲ್ಲಿ ಶಿಕ್ಷಣ ಕಾರ್ಯಪಡೆಯನ್ನು ರಚಿಸಬೇಕು. ಶಾಲೆಗಳಲ್ಲಿ ತೆರೆದಮನೆ ಕಾರ್ಯ ಕ್ರಮಗಳನ್ನು ಹೆಚ್ಚು ಹೆಚ್ಚು ಆಯೋಜಿಸಬೇಕು. ಇದರಿಂದ ಫೋಕ್ಸೋ ಗಳಂತಹ ಪ್ರಕರಣಗಳಿಗೆ ಕಡಿವಾಣ ಹಾಕಬಹುದು ಎಂದ ಅವರು, ಮಕ್ಕಳ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ನೋಂದಣಿ ಪುಸ್ತಕವನ್ನು ನಿರ್ವಹಣೆ ಮಾಡಬೇಕು ಎಂದರು.
5 ಕಿ.ಮೀ. ದೂರದಿಂದ ಶಾಲೆಗೆ ಬರುವ ಮಕ್ಕಳಿಗೆ ಪ್ರತೀ ತಿಂಗಳು 600 ರೂ.ನಂತೆ ನೀಡಲಾಗುತ್ತಿದೆ. ಇದರ ಸದುಪ ಯೋಗವನ್ನು ಮಕ್ಕಳು ಪಡೆಯು ವಂತಾಗಬೇಕು. ಗ್ರಾಪಂಗಳ ಅನುದಾನದಲ್ಲಿ ಶೇ.2ರಷ್ಟು ಮಕ್ಕಳಿಗೆ ಕ್ರೀಡಾ ಉಪಕರಣ ಗಳನ್ನು ಖರೀದಿಸಲು ಅವಕಾಶವಿದ್ದು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಸಮನ್ವಯತೆ ಹೊಂದಿ ಸರಬರಾಜು ಮಾಡಲು ಕ್ರಮ ವಹಿಸಬೇಕು ಎಂದರು.
ಮಕ್ಕಳ ಸ್ನೇಹಿ ಪಂಚಾಯತ್ ಅಭಿಯಾನದ ಕುರಿತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಮಹಿಳಾ ಮತ್ತು ಮಕ್ಕಳ ಗ್ರಾಮ ಸಭೆಯನ್ನು ಪ್ರತ್ಯೇಕವಾಗಿ ನಡೆಸಬೇಕು ಎಂದ ಅವರು, ದಸ್ತಾವೇಜು ನಿರ್ವಹಣೆಯಲ್ಲಿ ಉಡುಪಿ ಜಿಲ್ಲೆಯು ಇಡೀ ರಾಜ್ಯಕ್ಕೆ ಮಾದರಿಯಾಗಬೇಕು ಎಂದರು.
ಜಿಲ್ಲಾ ಆಸ್ಪತ್ರೆ, ತಾಲೂಕು ಆಸ್ಪತ್ರೆ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ತಾಯಿ ಕಾರ್ಡ್ ಮತ್ತು ಹೊರರೋಗಿ ಚೀಟಿಯಲ್ಲಿ ಬಾಲ್ಯವಿವಾಹ ಶಿಕ್ಷಾರ್ಹ ಅಪರಾಧ ಎಂದು ನಮೂದಿ ಸಬೇಕು ಎಂದ ಅವರು, ಕುಷ್ಠರೋಗ ಪೀಡಿತ ಮಕ್ಕಳ ಪಟ್ಟಿಯನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಸಲ್ಲಿಸುವಂತೆ ತಿಳಿಸಿದರು.
ಜಿಲ್ಲೆಯಲ್ಲಿ ವಿದ್ಯಾಭ್ಯಾಸಕ್ಕಾಗಿ ಹೊರಜಿಲ್ಲೆಗಳಿಂದ ಬಂದ ಹೆಚ್ಚಿನ ಮಕ್ಕಳು ವಸತಿ ನಿಲಯಗಳಲ್ಲಿ ವಾಸವಿದ್ದು, ಅವರಿಗೆ ವ್ಯವಸ್ಥಿತ ರೀತಿಯಲ್ಲಿ ಮೂಲ ಭೂತ ಸೌಕರ್ಯಗಳನ್ನು ಒದಗಿಸಬೇಕು. ವಸತಿ ನಿಲಯದ ಮಕ್ಕಳಿಗೂ ಕ್ರೀಡಾ ಉಪಕರಣ ಗಳನ್ನು ಒದಗಿಸುವ ಕೆಲಸವಾಗಬೇಕು. ವಸತಿ ನಿಲಯದ ಸಿಬ್ಬಂದಿ ಗಳು ವಿದ್ಯಾರ್ಥಿನಿಲಯದ ಮಕ್ಕಳ ಜೊತೆ ಸೌಹಾರ್ದ ತೆಯಿಂದ ವರ್ತಿಸಬೇಕು ಎಂದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿ ಕಾರದ ಸದಸ್ಯ ಕಾರ್ಯದರ್ಶಿ ಎಂ. ಪುರುಷೋತ್ತಮ್, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಐ.ಪಿ ಗಡಾದ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಗಣಪತಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇ ಶಕಿ ಅನಿತಾ ಮಡ್ಲೂರು, ಪೌರಾಯುಕ್ತ ರಾಯಪ್ಪ, ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.
ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ ನಡೆಸಿ
ಜಿಲ್ಲೆಯಲ್ಲಿ ವಿವಿಧ ಕಾರಣಗಳಿಗೆ ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆಯನ್ನು ಆದಷ್ಟು ಶೀಘ್ರವಾಗಿ ಮಾಡುವಂತೆ ತಿಳಿಸಿದ ಡಾ. ತಿಪ್ಪೇಸ್ವಾಮಿ, ಪೌರಕಾರ್ಮಿಕರ ಮಕ್ಕಳ ಸ್ಥಿತಿಗತಿಗಳ ವರದಿಯನ್ನು ನೀಡುವಂತೆ ಹಾಗೂ ಪೌರಕಾರ್ಮಿಕರ ಮಕ್ಕಳಿಗೆ ಬಾಲಕಾರ್ಮಿಕ, ಫೋಕ್ಸೊ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಗಳನ್ನು ಏರ್ಪಡಿಸುವಂತೆ ಅಧಿಕಾರಿ ಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ವಿಕಲಚೇತನರ ಗ್ರಾಮಸಭೆಯನ್ನು ನಿರಂತರವಾಗಿ ಆಯೋಜಿಸ ಬೇಕು. ಪಂಚಾಯತ್ ವ್ಯಾಪ್ತಿಯಲ್ಲಿ ಲಭ್ಯ ವಿರುವ ಶೇ.5ರ ಅನುದಾನವನ್ನು ವಿಕಲಚೇತನರಿಗೆ ಅಗತ್ಯ ಸಲಕರಣೆಯನ್ನು ಪೂರೈಸಲು ಬಳಸಿಕೊಳ್ಳಬೇಕು ಎಂದರು.
"ಜಿಲ್ಲೆಯಲ್ಲಿ 1522 ಅಂಗನವಾಡಿ ಕೇಂದ್ರಗಳಿದ್ದು, ಅವುಗಳಲ್ಲಿ 1051 ಸ್ವಂತ ಕಟ್ಟಡ, 31 ಬಾಡಿಗೆ ಕೇಂದ್ರದಲ್ಲಿ ಹಾಗೂ ಉಳಿದವು ಶಾಲೆಗಳ ಕಟ್ಟಡಗಳಲ್ಲಿ ನಡೆಯುತ್ತಿವೆ. ಸರಕಾರಿ ಉದ್ದೇಶಗಳಿಗೆ ಅಗತ್ಯವಿರುವ ನಿವೇಶನಗಳನ್ನು ಗುರುತಿಸಿ ಅಂಗನವಾಡಿ ಕೇಂದ್ರ ನಿರ್ಮಾಣಕ್ಕೆ ಅವಕಾಶ ಕಲ್ಪಿಸಬೇಕು. ಬಾಡಿಗೆ ಕಟ್ಟಡ, ಸಮುದಾಯ ಭವನ, ಸರಕಾರಿ ಇಲಾಖೆಯ ಖಾಲಿ ಜಾಗಗಳಲ್ಲಿರುವ ಅಂಗನವಾಡಿಗಳಲ್ಲಿ ಸುರಕ್ಷತಾ ಕ್ರಮಗಳ ಕುರಿತು ಗಮನ ಹರಿಸಬೇಕು".
-ಡಾ.ತಿಪ್ಪೇಸ್ವಾಮಿ ಕೆ.ಟಿ., ಸದಸ್ಯರು ಕರ್ನಾಟಕ ರಾಜ್ಯ ಮಕ್ಕಳ ಹಕ್ಕು ರಕ್ಷಣಾ ಆಯೋಗ ಬೆಂಗಳೂರು.