ಕೃಷಿ ಪಂಡಿತ ಪ್ರಶಸ್ತಿ: ಅರ್ಜಿ ಆಹ್ವಾನ
ಉಡುಪಿ: ಪ್ರಸಕ್ತ ಸಾಲಿನಲ್ಲಿ ಕೃಷಿ ಇಲಾಖೆ ವತಿಯಿಂದ ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಕೃಷಿ ಪಂಡಿತ ಪ್ರಶಸ್ತಿ ಬಹುಮಾನ ಯೋಜನೆಯಡಿ ರೈತರು ಹಾಗೂ ರೈತ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ನೂತನ/ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿ ರುವ ಮತ್ತು ರೈತ ಸಮುದಾಯ ದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವ ಆಸಕ್ತ ರೈತರು ಹಾಗೂ ರೈತ ಮಹಿಳೆ ಯರು ಕೃಷಿ ಇಲಾಖೆಯ ಕೆ-ಕಿಸಾನ್ ಪೋರ್ಟಲ್ನಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ತಮ್ಮ ಎಫ್ಐಡಿ ಬಳಸಿಕೊಂಡು ಸೆಪ್ಟಂಬರ್ 30 ರೊಳಗೆ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕ ರನ್ನು ಸಂಪರ್ಕಿಸಬಹುದು ಎಂದು ಉಡುಪಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
Next Story