ಡಾ.ಕಾತ್ಯಾಯಿನಿಗೆ ರಮಣಶ್ರೀ ಶರಣ ಸಾಹಿತ್ಯ ಪ್ರಶಸ್ತಿ
ಉಡುಪಿ, ಅ.6: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಹಾಗೂ ರಮಣಶ್ರೀ ಪ್ರತಿಷ್ಠಾನ ನೀಡುವ 2024ನೇ ಸಾಲಿನ ’ರಮಣಶ್ರೀ ಶರಣ ಸಾಹಿತ್ಯ ಪ್ರಶಸ್ತಿ’ಗೆ ಉಡುಪಿಯ ಸಾಹಿತಿ ಡಾ.ಕಾತ್ಯಾಯಿನಿ ಕುಂಜಿಬೆಟ್ಟು ಅವರ ’ಅಕ್ಕ ಕೇಳವ್ವ’ ಆಧುನಿಕ ವಚನಗಳ ಕೃತಿ ಪಾತ್ರವಾಗಿದೆ.
ನ.18ರಂದು ಬೆಂಗಳೂರಿನ ರಮಣಶ್ರೀ ಹೋಟೆಲ್ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಪ್ರಶಸ್ತಿಯು 20,000ರೂ. ನಗದು ಒಳಗೊಂಡಿದೆ ಎಂದು ಉಡುಪಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪ್ರೊ.ನಿರಂಜನ ಚೋಳಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story