ಗಣೇಶ್ ಪ್ರಸಾದ್ ನಾಯಕ್ಗೆ ಪಿಎಚ್ಡಿ ಪದವಿ
ಉಡುಪಿ, ಅ.೭: ಬಾರಕೂರು ಶ್ರೀರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜ ಕಾರ್ಯ ಉಪನ್ಯಾಸಕ ಗಣೇಶ್ ಪ್ರಸಾದ್ ಜಿ.ನಾಯಕ್, ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಮಾಜಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ.ದುಗ್ಗಪ್ಪ ಕಜೆಕಾರ್ ಮಾರ್ಗ ದರ್ಶನದಲ್ಲಿ ಸಲ್ಲಿಸಿದ ‘ಗ್ರಾಮೀಣಾಭಿವೃದ್ಧಿ ಯಲ್ಲಿ ಯುವಕ ಮಂಡಲಗಳ ಪಾತ್ರ’ ಎಂಬ ಮಹಾಪ್ರಬಂಧಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾಲಯ ಪಿ.ಎಚ್.ಡಿ ಪದವಿ ನೀಡಿದೆ.
ಇವರು ಈ ಹಿಂದೆ ತೆಂಕನಿಡಿಯೂರು ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಮತ್ತು ಮಂಗಳೂರಿನ ರಥಬೀದಿಯ ಡಾ. ಪಿ.ದಯಾನಂದ ಪೈ ಪಿ. ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಮಾಜ ಕಾರ್ಯ ವಿಭಾಗದಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದರು. ಇವರು ಜಿ.ಗೋಕುಲದಾಸ್ ನಾಯಕ್ ಮತ್ತು ಮಧುವಂತಿ ಜಿ.ನಾಯಕ್ ದಂಪತಿ ಪುತ್ರ.
Next Story