ವಿಧಾನ ಪರಿಷತ್ ಉಪಚುನಾವಣೆ: ಕಾಂಗ್ರೆಸ್ ಚರ್ಚಾ ಸಭೆ
ಉಡುಪಿ, ಅ.8: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಸ್ಥಳೀಯಾಡಳಿತ ಸಂಸ್ಥೆಗಳ ಉಪಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ನಗರಸಭಾ ಸದಸ್ಯರು ಹಾಗೂ ಸ್ಥಳೀಯ ಮುಖಂಡರನ್ನು ಭೇಟಿಯಾಗಿ ಮತದಾನದ ಬಗ್ಗೆ ಚರ್ಚಿಸಲು ಇಂದು ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಸಭೆ ನಡೆಯಿತು.
ಸಭೆಯಲ್ಲಿ ವಿಧಾನ ಪರಿಷತ್ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ವಿಧಾನಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ, ಮಾಜಿ ಸಚಿವ ಹಾಗೂ ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ, ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ನಾಯಕರಾದ ಪ್ರಸಾದ್ರಾಜ್ ಕಾಂಚನ್, ಕಿಶನ್ ಹೆಗ್ಡೆ ಕೊಳ್ಕೆಬೈಲು, ಎಂ.ಎಸ್. ಮೊಹಮ್ಮದ್, ವೆರೋನಿಕಾ ಕರ್ನೇಲಿಯೋ, ನಿತ್ಯಾನಂದ ಶೆಟ್ಟಿ, ದಿನಾಕರ್ ಹೇರೂರು, ಮಮತಾ ಶೆಟ್ಟಿ ಮತ್ತು ಉಡುಪಿ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮ ಪಂಚಾಯತ್ಗಳ ಸದಸ್ಯರು, ನಗರಸಭಾ ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು.
ಸಭೆಯಲ್ಲಿ ಉಪಚುನಾವಣೆಯ ಹಿನ್ನೆಲೆಯಲ್ಲಿ ಹಲವು ವಿಷಯಗಳ ಬಗ್ಗೆ ಚರ್ಚಿಸಿ ಅಭ್ಯರ್ಥಿ ರಾಜು ಪೂಜಾರಿ ಅವರ ಗೆಲುವಿಗೆ ಎಲ್ಲರೂ ಶಕ್ತಿ ಮೀರಿ ಪ್ರಯತ್ನ ಮಾಡಬೇಕೆಂದು ಮನವಿ ಮಾಡಲಾಯಿತು. ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಸ್ವಾಗತಿಸಿದರು. ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸತೀಶ್ ಕೊಡವೂರು ಕಾರ್ಯಕ್ರಮ ನಿರೂಪಿಸಿದರು. ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿನಾಕರ್ ಹೇರೂರು ವಂದಿಸಿದರು.