ಹರಿಯಾಣದಲ್ಲಿ ಗೆಲುವು: ಉಡುಪಿ ನಗರದಲ್ಲಿ ಬಿಜೆಪಿಯಿಂದ ಸಂಭ್ರಮಾಚರಣೆ
ಉಡುಪಿ: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗಳಿಸಿದ ಅಭೂತಪೂರ್ವ ಗೆಲುವಿನ ಹಿನ್ನೆಲೆಯಲ್ಲಿ ಬಿಜೆಪಿ ಉಡುಪಿ ನಗರ ಮಂಡಲದ ವತಿಯಿಂದ ಬಿಜೆಪಿ ಜಿಲ್ಲಾ ಕಚೇರಿಯ ಬಳಿ ಪಟಾಕಿ ಸಿಡಿಸಿ ಸಂಭ್ರಮಾಚರಣೆಯನ್ನು ನಡೆಸಲಾಯಿತು.
ಈ ಸಂದರ್ಭ ಬಿಜೆಪಿ ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್, ಜಿಲ್ಲಾ ಉಪಾಧ್ಯಕ್ಷ ಕಿರಣ್ ಕುಮಾರ್ ಬೈಲೂರು, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ ಅಂಬಲಪಾಡಿ, ಜಿಲ್ಲಾ ಮಾಧ್ಯಮ ಪ್ರಮುಖ್ ಗಿರೀಶ್ ಎಮ್. ಅಂಚನ್, ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ಜಗದೀಶ್ ಆಚಾರ್ಯ ಕಪೆಟ್ಟು, ನಗರ ಕಾರ್ಯದರ್ಶಿಗಳಾದ ಕಿಶೋರ್ ಕುಮಾರ ಕರಂಬಳ್ಳಿ, ಜಯಕರ ಕಡೆಕಾರು, ಅಲ್ಪಸಂಖ್ಯಾತ ಮೋರ್ಚಾ ಮಾಜಿ ರಾಜ್ಯ ಉಪಾಧ್ಯಕ್ಷ ಸಲೀಂ ಅಂಬಾಗಿಲು, ಉಡುಪಿ ನಗರ ಅಲ್ಪ ಸಂಖ್ಯಾತ ಮೋರ್ಚಾ ಅಧ್ಯಕ್ಷ ಡೇನಿಸ್ ಮಸ್ಕರೇನಸ್ ಮುಂತಾದವರು ಉಪಸ್ಥಿತರಿದ್ದರು.
Next Story