ಬಾರಕೂರು ಸರಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರಾಗಿ ಪ್ರೊ.ಭಾಸ್ಕರ ಶೆಟ್ಟಿ ಅಧಿಕಾರ ಸ್ವೀಕಾರ
ಬ್ರಹ್ಮಾವರ, ಅ.30: ಬಾರಕೂರಿರು ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿ ಪ್ರೊ. ಭಾಸ್ಕರ್ ಶೆಟ್ಟಿ ಸಲ್ವಾಡಿ ಅ.29ರಂದು ಅಧಿಕಾರ ಸ್ವೀಕರಿಸಿದರು.
ಇವರು ಈ ಹಿಂದೆ ಶಂಕರನಾರಾಯಣ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 12 ವರ್ಷಗಳ ಕಾಲ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ಬಳಿಕ ಅಜ್ಜರಕಾಡಿನ ಡಾ.ಜಿ.ಶಂಕರ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 7 ವರ್ಷಗಳ ಕಾಲ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದರು. ಕೋಟೇಶ್ವರದ ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ಥಾಪಕ ಪ್ರಾಂಶುಪಾಲರಾಗಿಯೂ ಸೇವೆ ಸಲ್ಲಿಸಿದ್ದರು.
Next Story