ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೃಷ್ಣ ಮಠಕ್ಕೆ ಭೇಟಿ
ಉಡುಪಿ, ಅ.31: ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ದೀಪಾವಳಿ ಹಬ್ಬದ ಪ್ರಯುಕ್ತ ಇಂದು ಸಂಜೆ ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ, ಶ್ರೀಕೃಷ್ಣನ ದರ್ಶನ ಪಡೆದರು.
ಈ ವೇಳೆ ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಸ್ವಾಮೀಜಿಯವರಿಂದ ಮಂತ್ರಾಕ್ಷತೆ ಸ್ವೀಕರಿಸಿದರು.
ಈ ವೇಳೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಜಿಲ್ಲಾ ಪಂಚಾಯತಿ ಸಿಇಒ ಪ್ರತೀಕ್ ಬಾಯಲ್, ಮುಖಂಡರಾದ ಉದಯ್ ಕುಮಾರ್ ಶೆಟ್ಟಿ, ಪ್ರಸಾದ್ ರಾಜ್ ಕಾಂಚನ್ ಉಪಸ್ಥಿತರಿದ್ದರು.
Next Story