ಮತದಾರರ ಪಟ್ಟಿ ಪರಿಷ್ಕರಣೆ: ಹೊಸ ನೋಂದಣಿಗೆ ಅವಕಾಶ
ಉಡುಪಿ, ನ.7: ಪ್ರಸ್ತುತ ಸಾಲಿನ ಮತದಾರರ ವಿಶೇಷ ಸಂಕ್ಷಿಪ್ತ ಪಟ್ಟಿ ಪರಿಷ್ಕರಣೆಯನ್ನು ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಮತಗಟ್ಟೆ ಅಧಿಕಾರಿಗಳು ನವೆಂಬರ್ 9, 10, 23 ಹಾಗೂ 24ರಂದು ತಮ್ಮ ಮತಗಟ್ಟೆ ಗಳಲ್ಲಿ ಹಾಜರಿದ್ದು, ಕಾರ್ಯ ನಿರ್ವಹಿಸಲಿದ್ದಾರೆ.
ಅರ್ಹ ಮತದಾರರು ತಮ್ಮ ವ್ಯಾಪ್ತಿಯ ಮತಗಟ್ಟೆಯ ಮತದಾರರ ಪಟ್ಟಿಯನ್ನು ಪರಿಶೀಲಿಸಿ, ತಮ್ಮ ಹಾಗೂ ತಮ್ಮ ಕುಟುಂಬದ ಸದಸ್ಯರ ಹೆಸರು, ಮತದಾರರ ಪಟ್ಟಿಯಲ್ಲಿದೆಯೇ ಎಂಬುದನ್ನು ಪರಿಶೀಲಿಸಿಕೊಳ್ಳಬೇಕು. ಹಾಗೂ 18 ವರ್ಷ ಪೂರೈಸಿದ ಮತದಾರರು ಅಗತ್ಯ ದಾಖಲೆಗಳನ್ನು ನೀಡಿ, ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಾಯಿಸಿಕೊ ಳ್ಳಬಹುದು ಎಂದು ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
Next Story