ವಿದ್ಯುತ್ ಕಂಬ ಹತ್ತಿ ಇಳಿಯುವ ಉಚಿತ ತರಬೇತಿ
ಕುಂದಾಪುರ, ನ.9: ಸ್ಥಳೀಯರಿಗೆ ಉದ್ಯೋಗ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಮೆಸ್ಕಾಂ ಇಲಾಖೆಯಿಂದ ವಿದ್ಯುತ್ ಕಂಬ ಹತ್ತಿ ಇಳಿಯುವ ಉಚಿತ ತರಬೇತಿ ಯನ್ನು ನ.11ರಿಂದ 13ರವರೆಗೆ ಕುಂದಾಪುರ ಗಾಂಧಿ ಮೈದಾನದಲ್ಲಿ ಆಯೋಜಿಸಲಾಗಿದೆ.
ಎಸ್ಎಸ್ಎಲ್ಸಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ತಮ್ಮ ಭಾವಚಿತ್ರ ಇರುವ ಗುರುತಿನ ಚೀಟಿ(ಆಧಾರ್ ಪ್ರತಿ) ಯೊಂದಿಗೆ ಆಗಮಿಸಿ ಕಂಬ ಹತ್ತಿ ಇಳಿಯುವ ತರಬೇತಿಯನ್ನು ಪಡೆದುಕೊಂಡು ಉದ್ಯೋಗ ಅವಕಾಶವನ್ನು ಪಡೆದುಕೊಳ್ಳಬಹುದು.
ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ಕುಂದಾಪುರ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story