ಪ್ರತ್ಯೇಕ ಪ್ರಕರಣ: ಇಬ್ಬರು ಆತ್ಮಹತ್ಯೆ
ಕಾರ್ಕಳ, ನ.17: ಜಾಗದ ವಿಚಾರವಾಗಿ ಮನನೊಂದು ನ.14ರಂದು ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮುಂಡ್ಕೂರು ಗ್ರಾಮದ ಸುಧಾಕರ ಕೆ. ಎಂಬವರು ಚಿಕಿತ್ಸೆ ಫಲಕಾರಿಯಾಗದೆ ನ.16ರಂದು ಸಂಜೆ ವೇಳೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟರು.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ: ಅನಾರೋಗ್ಯದಿಂದ ಬಳಲುತ್ತಿದ್ದ ಅಂಬಲಪಾಡಿಯ ದಯಾನಂದ ವಿ.(64) ಎಂಬವರು ಮಾನಸಿಕವಾಗಿ ಮನ ನೊಂದು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story