ಬಡಗಬೆಟ್ಟು ಸೊಸೈಟಿಗೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ
ಉಡುಪಿ, ನ.18: ಮಂಗಳೂರಿನಲ್ಲಿ ಜರಗಿದ 71ನೇ ಅಖಿಲ ಭಾರತ ಸಹಕಾರ ಸಸ್ತಾಹದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯು ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಸಾಧನೆಗಾಗಿ ರಾಜ್ಯ ಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿಯನ್ನು ಪಡೆದಿದೆ.
ಸಂಘದ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಪ್ರಶಸ್ತಿಯನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಕೆ.ಎನ್.ರಾಜಣ್ಣ, ದಿನೇಶ್ ಗುಂಡೂರಾವ್, ಸ್ಪೀಕರ್ ಯು.ಟಿ.ಖಾದರ್, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಜಿ.ಟಿ.ದೇವೇಗೌಡ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.
Next Story