ಜೀವನ್ ರಾಂ ಸುಳ್ಯಗೆ ‘ಶಾರದಾ ಕೃಷ್ಣ’ ಪ್ರಶಸ್ತಿ
ಉಡುಪಿ: ಹೆಬ್ರಿ ಶ್ರೀರಾಘವೇಂದ್ರ ಚಾರಿಟೇಬಲ್ ಟ್ರಸ್ಟ್ ಪ್ರಾಯೋಜಿತ ಉಡುಪಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ನೀಡುವ ‘ಶಾರದಾ ಕೃಷ್ಣ’ ಪ್ರಶಸ್ತಿ -2025ಕ್ಕೆ ಈ ಬಾರಿ ಕನ್ನಡ ರಂಗಭೂಮಿಯ ರಂಗನಿರ್ದೇಶಕ, ನಟ, ರಂಗ ಶಿಕ್ಷಕ, ಸಂಘಟಕ ಡಾ.ಜೀವನ್ ರಾಂ ಸುಳ್ಯ ಆಯ್ಕೆಯಾಗಿದ್ದಾರೆ.
ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್.ಪಿ. ಮಾತನಾಡಿ, ಜನವರಿ ತಿಂಗಳಲ್ಲಿ ನಡೆಯುವ ಸಂಸ್ಕೃತಿ ಉತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿ ಪತ್ರ, ಫಲಕ ಹಾಗೂ ರೂಪಾಯಿ 25000 ನಗದಿನೊಂದಿಗೆ ಗೌರವಿಸಲಾಗುವುದು ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕ ಗೌರವಾಧ್ಯಕ್ಷ ವಿಶ್ವನಾಥ್ ಶೆಣೈ, ಶಾರದಾ ಕೃಷ್ಣ ಪ್ರಶಸ್ತಿ ಸಮಿತಿಯ ಸಂಚಾಲಕ ರಾಘವೇಂದ್ರ ಪ್ರಭು ಕರ್ವಾಲು, ರಾಘವೇಂದ್ರ ಚಾರಿಟೇಬಲ್ ಟ್ರಸ್ಟ್ ಸದಸ್ಯ ವೈಕುಂಠ ಹೇರಳೆ, ಗೌರವ ಸಲಹೆಗಾರ ಜನಾರ್ದನ ಕೊಡವೂರು ಉಪಸ್ಥಿತರಿದ್ದರು.
Next Story