ಉಡುಪಿ: ಮತ ಎಣಿಕೆ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ
ಉಡುಪಿ, ನ.25: ಜಿಲ್ಲೆಯ ಗ್ರಾಪಂಗಳ ತೆರವುಗೊಂಡ ಸ್ಥಾನಗಳ ಉಪ ಚುನಾವಣೆಯ ಮತ ಎಣಿಕೆ ಕಾರ್ಯವು ನವೆಂಬರ್ 26ರಂದು ಉಡುಪಿ, ಬ್ರಹ್ಮಾವರ ಹಾಗೂ ಕಾರ್ಕಳ ತಾಲೂಕು ಕಚೇರಿಗಳಲ್ಲಿ ನಡೆಯಲಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಮುಕ್ತ ಮತ್ತು ನ್ಯಾಯಯುತ ಹಾಗೂ ನಿಷ್ಪಕ್ಷಪಾತವಾಗಿ ಮತ ಎಣಿಕೆ ಕಾರ್ಯವನ್ನು ನಡೆಸುವ ನಿಟ್ಟಿನಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163 ಮತ್ತು ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 35ರಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ನ.26ರಂದು ಬೆಳಗ್ಗೆ 5 ಗಂಟೆಯಿಂದ ಮತ ಎಣಿಕೆ ಕಾರ್ಯ ಮುಕ್ತಾಯಗೊಳ್ಳುವವರೆಗೆ ಮೇಲ್ಕಂಡ ತಾಲೂಕು ಕಚೇರಿಗಳಲ್ಲಿ ಮತದಾನ ಎಣಿಕೆ ಕೇಂದ್ರಗಳ ಸುತ್ತಮುತ್ತ 200ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ, ಜಿಲ್ಲಾ ಚುನಾವಣಾಧಿಕಾರಿ ಯಾಗಿರುವ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.
Next Story