ವೃದ್ಧ ನಾಪತ್ತೆ
ಉಡುಪಿ, ಡಿ.17: ಉಡುಪಿ ತಾಲೂಕು ಬಡಗುಬೆಟ್ಟು ಗ್ರಾಮದ ಬೈಲೂರು ಎನ್ಜಿಒ ಕಾಲೋನಿ ನಿವಾಸಿ ಬಿ ಭಾಸ್ಕರ್ ನಾಯ್ಕ್ (65) ಎಂಬ ವರು 2023ರ ಜನವರಿ ಮಾಹೆಯಲ್ಲಿ ಮನೆ ಬಿಟ್ಟು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.
5 ಅಡಿ 3 ಇಂಚು ಎತ್ತರ, ಸಾಧಾರಣ ಶರೀರ, ದುಂಡು ಮುಖ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ, ತುಳು, ತೆಲುಗು, ಹಿಂದಿ ಹಾಗೂ ಮಲಯಾಳಂ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Next Story