ಲಾರಿ ಢಿಕ್ಕಿ: ಬೈಕ್ ಸವಾರ ಮೃತ್ಯು
ಕಾರ್ಕಳ, ಡಿ.19: ಲಾರಿಯೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ನೀರೆ ಅಂಚೆ ಕಚೇರಿಯ ಶಾರದ ವೇದಿಕೆಯ ಬಳಿ ಡಿ.18ರಂದು ನಡೆದಿದೆ.
ಮೃತರನ್ನು ರಾಜು ಎಂದು ಗುರುತಿಸಲಾಗಿದೆ. ಉಡುಪಿ ಕಡೆಯಿಂದ ಕಾರ್ಕಳ ಕಡೆಗೆ ಹೋಗುತ್ತಿದ್ದ ಲಾರಿಯು ಬೈಲೂರು ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಬೈಕ್ ಸಮೇತ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಸವಾರ ರಾಜು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟರೆಂದು ತಿಳಿದುಬಂದಿದೆ.
ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story