ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ
ಶಂಕರನಾರಾಯಣ, ಡಿ.19: ಮಾನಸಿಕ ಖಿನ್ನತೆಯಿಂದ ಡಿ.16ರಂದು ಮನೆಯಲ್ಲಿ ಇಲಿಪಾಷಣ ಸೇವಿಸಿ ಆತ್ಮಹತ್ಯೆ ಯತ್ನಿಸಿದ್ದ ಆಜ್ರಿ ಗ್ರಾಮದ ಬಾಬಿ(38) ಎಂಬವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಡಿ.18ರಂದು ಮಧ್ಯಾಹ್ನ ವೇಳೆ ಮೃತಪಟ್ಟರು. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೊಂದು ಪ್ರಕರಣದಲ್ಲಿ ಬ್ಯಾಂಕಿನ ಸಾಲದ ಹಣ ಮರು ಪಾವತಿಸಲು ಸಾದ್ಯವಾಗದ ಚಿಂತೆಯಲ್ಲಿ ಮಾನಸಿಕವಾಗಿ ನೊಂದ ಆಜ್ರಿ ಗ್ರಾಮದ ಬಸವ(78) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story